Top Newsಕ್ರೈಂ ಸ್ಟೋರಿರಾಜ್ಯಸುದ್ದಿ

ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನ.26 ಕ್ಕೆ ಮುಂದೂಡಿದೆ.

ಕೊಲೆ ಕೇಸ್‌ನ ದರ್ಶನ್, ಪವಿತ್ರಾಗೌಡ ಸೇರಿ ಆರು ಆರೋಪಿಗಳ ಜಾಮೀನು ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಲಾಯಿತು. ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರು ವಿಚಾರಣೆಯನ್ನು ಮುಂದೂಡಿದ್ದಾರೆ.

ಈಗ ಹೆಚ್ಚುವರಿ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡ್ತಾ ಇದ್ದೀವಿ. ಇನ್ನೂ ನಮಗೆ ಆರೋಗ್ಯದ ಬಗ್ಗೆ ವರದಿ ಸಿಕ್ಕಿಲ್ಲ. ಒಂದು ವಾರದಲ್ಲಿ ಕೋರ್ಟ್‌ಗೆ ಹಾಕಿದ್ದಾರೆ. ಸೀಲ್ಡ್ ಕವರ್ ಅಲ್ಲಿ ನೀಡಿದ್ದಾರೆ. ನಮಗೆ ಗೊತ್ತಾಗ್ತಿಲ್ಲ ಎಷ್ಟು ದಿನ ಚಿಕಿತ್ಸೆ ಮುಂದುವರೆಯಬೇಕು ಅಂತ ನಮಗೂ ಒಂದು ಕಾಪಿ ನೀಡಬಹುದಲ್ವಾ ಎಂದ ಎಸ್‌ಪಿಪಿ ಪ್ರಸನ್ನಕುಮಾರ್ ವಾದಿಸಿದರು.

ಈ ವೇಳೆ ದರ್ಶನ್ ಪರ ವಾದ ಮಂಡಿಸಿದ ಸಿ.ವಿ.ನಾಗೇಶ್, ಹೊಸದಾಗಿ ಮತ್ತೊಂದು ರಿಪೋರ್ಟ್ ನೀಡಿದರು. ಅಲ್ಲದೇ, ಶನಿವಾರಕ್ಕೆ ವಾದ ಮಂಡನೆಗೆ ಅವಕಾಶ ಕೋರಿದರು.

ನವೆಂಬರ್ 21ರಂದೇ ಪವಿತ್ರಾ ಗೌಡ, ಆರ್. ನಾಗರಾಜು, ಅನುಕುಮಾರ್, ಎಂ. ಲಕ್ಷ್ಮಣ್, ಜಗದೀಶ್ ಅವರ ಜಾಮೀನು ಅರ್ಜಿ ವಿಚಾರಣೆ ಸಹ ಇದೆ. ಅವರುಗಳ ಅರ್ಜಿ ವಿಚಾರಣೆ ಇಂದೇ ನಡೆಯಲಿದೆಯೇ ಅಥವಾ ಮುಂದಕ್ಕೆ ಹೋಗಲಿದೆಯೇ ಸುದ್ದಿ ಖಾತ್ರಿಯಿಲ್ಲ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೂನ್ 11 ರಂದು ದರ್ಶನ್ ಬಂಧನವಾಗಿತ್ತು. ಐದು ತಿಂಗಳ ಕಾಲ ಜೈಲಿನಲ್ಲಿ ಕಳೆದ ದರ್ಶನ್​ಗೆ ಮೂರು ವಾರಗಳ ಹಿಂದಷ್ಟೆ ಮಧ್ಯಂತರ ಜಾಮೀನು ನೀಡಲಾಗಿದೆ. ಅನಾರೋಗ್ಯದ ಕಾರಣ ನೀಡಿ ದರ್ಶನ್ ಮಧ್ಯಂತರ ಜಾಮೀನು ಪಡೆದುಕೊಂಡಿದ್ದಾರೆ.

Comments (0)

Your email address will not be published. Required fields are marked *

Back to top button