Top Newsಮನರಂಜನೆಸುದ್ದಿ

ಒಂದು ಬಾಗಿಲು ಇದೆ ಹೊರಗಡೆ ಹೋಗೋಕೆ- ಅವಾಚ್ಯ ಪದ ಬಳಸಿದ ರಜತ್‌ಗೆ ಕಿಚ್ಚನ ಕ್ಲಾಸ್

ಬಿಗ್​ಬಾಸ್​ ಮನೆಯಲ್ಲಿ  ಈ ವಾರ  ಸಾಕಷ್ಟು ಘಟನೆಗಳು ನಡೆದಿವೆ. ಸ್ಪರ್ಧಿಗಳೊಂದಿಗೆ ಕೆಟ್ಟದಾಗಿ ವರ್ತಿಸಿದ್ದಕ್ಕೆ, ಅವಾಚ್ಯ ಶಬ್ದಗಳ ಬಳಕೆ ಮಾಡಿದ್ದಕ್ಕೆ ಈಗಾಗಲೇ ಲಾಯರ್ ಜಗದೀಶ್ ಅನ್ನು ಹೊರಗೆ ಕಳಿಸಲಾಗಿದೆ. ಇದೀಗ ಜಗದೀಶ್​ ಸಹೋದರ ಒಬ್ಬ ಮನೆಗೆ ಬಂದಿದ್ದಾರೆ ಆತನ ಹೆಸರೇ ರಜತ್. ಜಗದೀಶ್​ ರೀತಿಯೇ ಹೊಲಸು ಮಾತುಗಳನ್ನು ಆಡುತ್ತಾ ಮನೆಯ ಇತರೆ ಸದಸ್ಯರಿಗೆ ಕಿರಿಕಿರಿ ನೀಡುತ್ತಿದ್ದಾರೆ. ಮನೆಯ ಸದಸ್ಯರ ಬಗ್ಗೆ ಅವಾಚ್ಯವಾಗಿ ಮಾತನಾಡಿದ ರಜತ್​ಗೆ ನಗುತ್ತಲೇ ಎಚ್ಚರಿಕೆ ನೀಡಿದ್ದಾರೆ.ವೈಲ್ಡ್ ಕಾರ್ಡ್ ಸ್ಪರ್ಧಿಗಳು ಆಗಮಿಸಿದ್ಮೇಲೆ ಆಟ ಮತ್ತಷ್ಟು ರೋಚಕವಾಗಿದೆ. ಗೋಲ್ಡ್ ಸುರೇಶ್‌ಗೆ ಅವಾಚ್ಯ ಪದ ಬಳಸಿದ್ದ ರಜತ್ ಕಿಶನ್‌ಗೆ ಸುದೀಪ್  ಕ್ಲಾಸ್ ತೆಗೆದುಕೊಂಡಿದ್ದಾರೆ.

ಸುದೀಪ್ ಅವರು ರಜತ್‌ಗೆ ಕನ್ನಡದಲ್ಲಿ ತುಂಬಾ ಪದಗಳಿವೆ. ನಿಮ್ಮೆಲ್ಲರಿಗೂ ತೂಕಗಳಿವೆ ಎಂದ ಸುದೀಪ್  ಮಾತಿಗೆ ಸುರೇಶ್ ಅವರು ಎದೆಗೆ ಕೊಟ್ರೋ ಅದನ್ನು ನನಗೆ ತಡೆದುಕೊಳ್ಳಲು ಆಗಲಿಲ್ಲ. ಆ ಪದಗಳೆಲ್ಲವೂ ಮಾತಿನ ಭರದಲ್ಲಿ ಬಂತು ಎಂದು ರಜತ್ ಸಮಜಾಯಿಸಿ ಕೊಡುತ್ತಾರೆ.ನನಗೆ ಕೋಪ ಬಂದಾಗ ಇಂತಹದ್ದೇ ಬಾಯಲ್ಲಿ ಬರೋದು ಅಂತೀರಾ. ಇದೀಗ ಆ ಮಾತುಗಳನ್ನೆಲ್ಲ ನನ್ನ ಮುಂದೆ ವಾಪಸ್ ರಿಪೀಟ್ ಮಾಡಿ.

ಆಗ ರಜತ್ ಅವರು ಇನ್ನೊಂದು ಸಲ ಆ ತಪ್ಪನ್ನು ರಿಪೀಟ್ ಮಾಡಲ್ಲ ಎಂದಿದ್ದಾರೆ. ಆಗ ಸುದೀಪ್ ಅವರು ನಗುತ್ತಾ, ಮುಂದೆ ತಪ್ಪು ಆದರೆ ಮನೆಯಲ್ಲಿ ಒಂದು ಬಾಗಿಲು ಇದೆ ಹೊರಗಡೆ ಹೋಗೋಕೆ ಎಂದು ಹೇಳಿದ್ದಾರೆ.

 

Comments (0)

Your email address will not be published. Required fields are marked *

Back to top button