Wednesday, June 25, 2025
28.6 C
Bengaluru
Google search engine
LIVE
ಮನೆ#Exclusive NewsTop Newsಗೂಗಲ್ ಮ್ಯಾಪ್ ಎಡವಟ್ಟು: ಸೇತುವೆಯಿಂದ ನದಿಗೆ ಬಿದ್ದ ಕಾರು, ಸ್ಥಳದಲ್ಲೇ ಮೂವರು ಸಾವು

ಗೂಗಲ್ ಮ್ಯಾಪ್ ಎಡವಟ್ಟು: ಸೇತುವೆಯಿಂದ ನದಿಗೆ ಬಿದ್ದ ಕಾರು, ಸ್ಥಳದಲ್ಲೇ ಮೂವರು ಸಾವು

ಗೂಗಲ್​ ಮ್ಯಾಪ್ ನಂಬಿ ಮೂವರು ಪ್ರಾಣ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಂದು ಕಾರಿನ ಚಾಲಕ ಗೂಗಲ್ ಮ್ಯಾಪ್ ನೋಡಿಕೊಂಡು ಕಾರು ಚಲಾಯಿಸುತ್ತಿದ್ದ, ಜತೆ ಆತನ ಸ್ನೇಹಿತರು ಕೂಡ ಇದ್ದರು. ಗೂಗಲ್ ತೋರಿಸಿದ್ದನ್ನು ನಂಬಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯನ್ನು ಹತ್ತಿದ್ದಾರೆ. ಸ್ವಲ್ಪ ದೂರ ಹೋಗುತ್ತಿದ್ದಂತೆ ಸೇತುವೆ ಕಾಮಗಾರಿ ಅಲ್ಲಿಗೇ ನಿಂತಿದೆ ಅವರಿಗೆ ಇದು ಕಂಡಿಲ್ಲ, ಅಲ್ಲಿಂದ ನೇರವಾಗಿ ಕಾರು ಕೆಳಗಿರುವ ನದಿಗೆ ಬಿದ್ದ ಪರಿಣಾಮ ಮೂವರು ಪ್ರಾಣ ಕಳೆದುಕೊಂಡಿದ್ದಾರೆ.ಉತ್ತರ ಪ್ರದೇಶದ ಬರೇಲಿ ಮತ್ತು ಬುಡೌನ್ ಜಿಲ್ಲೆಗಳ ನಡುವಿನ ಗಡಿಯಲ್ಲಿರುವ ಫರೀದ್‌ಪುರ ಮತ್ತು ದತಗಂಜ್‌ಗೆ ಸಂಪರ್ಕ ಕಲ್ಪಿಸುವ ರಾಮಗಂಗಾ ನದಿಯ ಮೇಲಿನ ಅಪೂರ್ಣ ಸೇತುವೆಯಿಂದ ಕಾರು ಉರುಳಿ ಬಿದ್ದ ಪರಿಣಾಮ ಮೂವರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

 

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments