Tuesday, June 24, 2025
26.6 C
Bengaluru
Google search engine
LIVE
ಮನೆ#Exclusive NewsTop NewsRBI ಗವರ್ನರ್ ಶಕ್ತಿಕಾಂತ್​ ದಾಸ್​ ಆರೋಗ್ಯದಲ್ಲಿ ಏರುಪೇರು: ಅಪೋಲೋ ಆಸ್ಪತ್ರೆಗೆ ದಾಖಲು

RBI ಗವರ್ನರ್ ಶಕ್ತಿಕಾಂತ್​ ದಾಸ್​ ಆರೋಗ್ಯದಲ್ಲಿ ಏರುಪೇರು: ಅಪೋಲೋ ಆಸ್ಪತ್ರೆಗೆ ದಾಖಲು

ಚೆನ್ನೈ: ಭಾರತೀಯ ರಿಸರ್ವ್ ಬ್ಯಾಂಕ್‌ನ ಗವರ್ನರ್ ಶಕ್ತಿಕಾಂತ ದಾಸ್ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಇಂದು ಬೆಳಿಗ್ಗೆ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಾರ್ಯನಿಮಿತ್ತವಾಗಿ ಗವರ್ನರ್ ಶಕ್ತಿಕಾಂತ ದಾಸ್ ಅವರು ಸೋಮವಾರ ಚೆನ್ನೈಗೆ ಭೇಟಿ ನೀಡಿದ್ದರು. ಎದೆಯುರಿಯಿಂದ ಬಳಲುತ್ತಿದ್ದ ಅವರನ್ನು ಇಂದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅವರ ಆರೋಗ್ಯದ ಕುರಿತು ಮಾಹಿತಿ ನೀಡಿದ ಅಪೋಲೋ ಆಸ್ಪತ್ರೆ, ನಿನ್ನೆ ಎದೆಯುರಿಯಿಂದ ಬಳಲಿದ ಪರಿಣಾಮ ಶಕ್ತಿಕಾಂತ ದಾಸ್ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು. ಅವರು ಆರೋಗ್ಯವಾಗಿದ್ದಾರೆ. ಯಾರೂ ಆತಂಕಕ್ಕೊಳಗಾಗುವ ಅವಶ್ಯಕತೆಯಿಲ್ಲ. ಮುಂದಿನ 2-3 ಗಂಟೆಗಳಲ್ಲಿ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ತಿಳಿಸಿದೆ.

ಇತ್ತೀಚಿನ ಸಂದರ್ಶನವೊಂದರಲ್ಲಿ, ಗವರ್ನರ್ ದಾಸ್ ಅವರು ಭಾರತದ ಆರ್ಥಿಕ ಸ್ಥಿತಿಸ್ಥಾಪಕತ್ವದಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ, ರಕ್ಷಣಾವಾದ, ವ್ಯಾಪಾರ ಯುದ್ಧಗಳು ಮತ್ತು ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳನ್ನು ಒಳಗೊಂಡಂತೆ ಬಾಹ್ಯ ಆಘಾತಗಳನ್ನು ನಿಭಾಯಿಸಲು ದೇಶವು ಉತ್ತಮವಾಗಿ ಸಿದ್ಧವಾಗಿದೆ ಎಂದು ಹೇಳಿದ್ದಾರೆ.

ಶಕ್ತಿಕಾಂತ್​ ದಾಸ್​ ಅವರನ್ನು RBI ಗವರ್ನರ್‌ ಆಗಿ ಮೂರು ವರ್ಷದ ಅವಧಿಗೆ ಕೇಂದ್ರ ಸರ್ಕಾರ 2021ರಲ್ಲಿ ಮರು ನೇಮಕ ಮಾಡಿತ್ತು.

ಶಕ್ತಿಕಾಂತ್‌ ದಾಸ್‌ರವರನ್ನು ಡಿಸೆಂಬರ್ 10, 2021ರಿಂದ ಡಿಸೆಂಬರ್ 10,2024ರವರೆಗೆ ಮೂರು ವರ್ಷಗಳ ಅವಧಿಗೆ ನೇಮಿಸಲಾಗಿತ್ತು.ಶಕ್ತಿಕಾಂತ ದಾಸ್‌ರವರು 2018ರ ಡಿಸೆಂಬರ್‌ನಲ್ಲಿ RBI ಗವರ್ನರ್‌ ಆಗಿ ನೇಮಕಗೊಂಡಿದ್ದರು. ಇದೇ ಡಿಸೆಂಬರ್‌ಗೆ ಅವರ ಅಧಿಕಾರವಧಿ ಮುಕ್ತಾಯವಾಗಲಿದ್ದ ಹಿನ್ನೆಲೆಯಲ್ಲಿ ಅವರನ್ನು ಮರುನೇಮಕ ಮಾಡಲಾಗಿತ್ತು.

ಎನ್‌ಡಿಎ ಸರ್ಕಾರದಲ್ಲಿ ಎರಡನೇ ಬಾರಿಗೆ RBI ಗವರ್ನರ್‌ ಆಗಿ ನೇಮಕಗೊಂಡ ಮೊದಲ ವ್ಯಕ್ತಿ ಶಕ್ತಿಕಾಂತ ದಾಸ್ ಆಗಿದ್ದಾರೆ. ಈ ಮೊದಲಿದ್ದ ಗವರ್ನರ್​ ಊರ್ಜಿತ್ ಪಟೇಲ್‌ರವರು ಸರ್ಕಾರದೊಂದಿಗಿನ ಭಿನ್ನಾಭಿಪ್ರಾಯದ ಕಾರಣಕ್ಕಾಗಿ ಈ ಹುದ್ದೆಗೆ ರಾಜೀನಾಮೆ ನೀಡಿ ಹೊರಬಂದಿದ್ದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments