#Exclusive NewsTop News

ಬಾಂಗ್ಲಾದೇಶದ ಪ್ರಸ್ತುತ ಸ್ಥಿತಿ, ಚಿನ್ಮಯ್ ದಾಸ್ ಬಂಧನ ಕುರಿತು ಹೇಳಿಕೆ ಬಿಡುಗಡೆ ಮಾಡಿದ ಇಸ್ಕಾನ್

ಬಾಂಗ್ಲಾದೇಶದ ವಿವಿಧ ಪ್ರದೇಶಗಳಲ್ಲಿ ಸಾತನವಾದಿಗಳ ವಿರುದ್ಧದ ಹಿಂಸಾಚಾರ ಮತ್ತು ದಾಳಿಗಳನ್ನು ನಾವು ಖಂಡಿಸುತ್ತೇವೆ, ಸನಾತನ ಸಮುದಾಯಕ್ಕೆ ಶಾಂತಿಯುತವಾಗಿ ಬದುಕುವಂತೆ ಅನುವು ಮಾಡಿಕೊಡುವಂತೆ ಅಧಿಕಾರಿಗಳನ್ನು ಒತ್ತಾಯಿಸುತ್ತೇವೆ ಎಂದು ಇಸ್ಕಾನ್ ಹೇಳಿಕೆ ಬಿಡುಗಡೆ ಮಾಡಿದೆ. ಬಾಂಗ್ಲಾದೇಶ ಸಮ್ಮಿಲಿತ್‌ ಸನಾತನಿ ಜಾಗರಣ ಜೋತೆ ಎಂಬ ಹಿಂದೂ ಸಂಘಟನೆಯ ವಕ್ತಾರ ಚಿನ್ಮಯ್ ಕೃಷ್ಣದಾಸ್‌ ಬ್ರಹ್ಮಚಾರಿ ರಾಷ್ಟ್ರದ ಅಲ್ಪಸಂಖ್ಯಾತ ಗುಂಪುಗಳ ರಕ್ಷಣೆಗಾಗಿ ಧ್ವನಿ ಎತ್ತುತ್ತಿದ್ದಾರೆ.

ವಾಕ್ ಸ್ವಾತಂತ್ರ್ಯದ ಹಕ್ಕನ್ನು ಎತ್ತಿಹಿಡಿಯುವುದು ಮತ್ತು ಈ ಹಕ್ಕನ್ನು ರಕ್ಷಿಸಲು ಇತರರನ್ನು ಪ್ರೋತ್ಸಾಹಿಸುವ ಅವರ ಪ್ರಯತ್ನಗಳನ್ನು ಬೆಂಬಲಿಸುವುದು ಅತ್ಯಗತ್ಯ. ಅವರಿಗೆ ನ್ಯಾಯ ಸಿಗಬೇಕು ಎಂದು ಒತ್ತಾಯಿಸಿದ್ದಾರೆ. ಸನಾತನ ಸಮುದಾಯದ ಮೇಲಿನ ದಾಳಿಗಳಿಗೆ ಕಾರಣರಾದವರನ್ನು ಗುರುತಿಸಿ ಶಿಕ್ಷೆ ಕೊಡಿಸಿ, ಚಿನ್ಮಯ್ ಕೃಷ್ಣ ದಾಸ್ ಮತ್ತು ಇತರ ಸನಾತನಿಗಳ ನಾಗರಿಕ ಹಕ್ಕುಗಳನ್ನು ರಕ್ಷಿಸಿ, ದೇಶದ ಎಲ್ಲಾ ಸಮುದಾಯಗಳ ನಡುವೆ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ತಕ್ಷಣದ ಮತ್ತು ಪರಿಣಾಮಕಾರಿ ಕ್ರಮಗಳನ್ನು ಜಾರಿಗೊಳಿಸಿ ಎಂದು ಒತ್ತಾಯಿಸಿದ್ದಾರೆ.

ದೇಶದ್ರೋಹದ ಆರೋಪ ಎದುರಿಸುತ್ತಿರುವ ‘ಸಮ್ಮಿಲಿತ್‌ ಸನಾತನಿ ಜಾಗರಣ ಜೋತೆ’ ಎಂಬ ಹಿಂದೂ ಸಂಘಟನೆಯ ವಕ್ತಾರ ಚಿನ್ಮಯ್ ಕೃಷ್ಣದಾಸ್‌ ಬ್ರಹ್ಮಚಾರಿ ಅವರ ಬಂಧನದ ವೇಳೆ ನಡೆದ ಘರ್ಷಣೆಯಲ್ಲಿ‌ ಹತ್ಯೆಯಾದ ವಕೀಲ ಸೈಫುಲ್‌ ಇಸ್ಲಾಂ ಅವರ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ನ್ಯಾಯಾಲಯದ ಸಂಕೀರ್ಣದಲ್ಲಿನ ಮಸೀದಿ ಕಟ್ಟಡದ ಎರಡನೇ ಮಹಡಿಯಲ್ಲಿ ಅಳವಡಿಸಿದ್ದ ಕಿಟಕಿ ಗಾಜುಗಳನ್ನು ಒಡೆದ, ವಾಹನಗಳನ್ನು ಜಖಂಗೊಳಿಸಿದ, ವಕೀಲರ ಕೊಠಡಿಗಳ ಒಳಗೆ ನುಗ್ಗಿದ ಆರೋಪಕ್ಕೆ ಸಂಬಂಧಿಸಿ 21 ಮಂದಿಯನ್ನು ಬಂಧಿಸಲಾಗಿದೆ. ಭದ್ರತಾ ಪಡೆಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಹಾಗೂ ಅವರ ಮೇಲೆ ದಾಳಿ ನಡೆಸಿದ್ದಕ್ಕಾಗಿ ಇವರನ್ನು ಬಂಧಿಸಲಾಗಿದೆ’ ಎಂದು ಬಾಂಗ್ಲಾದ ‘ಬಿಡಿನ್ಯೂಸ್‌24.ಕಾಂ’ ವರದಿ ಮಾಡಿದೆ.

Comments (0)

Your email address will not be published. Required fields are marked *

Back to top button