ಚೆನ್ನೈ: ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ‘ಫೆಂಗಲ್’ ಚಂಡಮಾರುತ ರೂಪುಗೊಂಡಿದ್ದು, ಇಂದು ಉತ್ತರ ತಮಿಳುನಾಡು ಹಾಗೂ ಪುದುಚೇರಿ ಕರಾವಳಿಗೆ ಅಪ್ಪಳಿಸಲಿದೆ. ಫೆಂಗಲ್ ಚಂಡಮಾರುತದಿಂದ ಈಗಾಗಲೇ ಗುಡುಗು ಸಹಿತ ಭಾರಿ ಮಳೆ ಎದುರಿಸುತ್ತಿರುವ ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿ ಶನಿವಾರವೂ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಚೆನ್ನೈ, ತಿರುವಳ್ಳೂರು, ಕಾಂಚೀಪುರಂ, ಕಲ್ಲಕುರಿಚಿ, ಮತ್ತು ತಮಿಳುನಾಡಿನ ಕಡಲೂರು ಜಿಲ್ಲೆ ಮತ್ತು ಪುದುಚೇರಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಮುನ್ಸೂಚನೆ ನೀಡಿದೆ. ಜೊತೆಗೆ ರಾಣಿಪೇಟ್, ತಿರುವಣ್ಣಾಮಲೈ, ವೆಲ್ಲೂರು, ಪೆರಂಬಲೂರು, ಅರಿಯಲೂರು, ತಂಜಾವೂರು, ತಿರುವರೂರು, ಮೈಲಾಡುತುರೈ, ನಾಗಪಟ್ಟಿಣಂ ಜಿಲ್ಲೆಗಳು ಮತ್ತು ಕಾರೈಕಲ್ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
#CycloneFengal | A #RedAlert has been issued for seven districts, including Chennai, Tiruvallur, Chengalpattu, Kancheepuram, Villupuram, Kallakurichi, Cuddalore, and Puducherry for Saturday.https://t.co/OnU67xyDOn
— The New Indian Express (@NewIndianXpress) November 30, 2024
ಪುದುಚೇರಿಗೆ ಸಮೀಪದಲ್ಲಿರುವ ಕಾರೈಕಲ್ ಮತ್ತು ಮಹಾಬಲಿಪುರಂ ನಡುವೆ ಭೂಕುಸಿತ ಸಂಭವಿಸಲಿದೆ ಎಂದು ಪ್ರಾದೇಶಿಕ ಹವಾಮಾನ ಕೇಂದ್ರ ಮುನ್ನೆಚ್ಚರಿಕೆ ನೀಡಿದೆ. ಚಂಡಮಾರುತದಿಂದ ಗಂಟೆಗೆ 70 ರಿಂದ 80 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಚಂಡಮಾರುತ ನೆಲೆಯಾಗುವ ಸಮಯದಲ್ಲಿ ಗಂಟೆಗೆ 90 ಕಿ.ಮೀ ವೇಗದಲ್ಲಿ ಗಾಳಿ ಬೀಸಬಹುದು ಎಂದು ಹೇಳುತ್ತಾರೆ.
ಇಂದು ಉತ್ತರ ತಮಿಳುನಾಡು ಹಾಗೂ ಪುದುಚೇರಿ ಕರಾವಳಿ ಭಾಗಕ್ಕೆ ಫೆಂಗಲ್ ಚಂಡಮಾರುತ ಅಪ್ಪಳಿಸುವ ಹಿನ್ನೆಲೆಯಲ್ಲಿ ಸಮುದ್ರಕ್ಕೆ ಇಳಿಯದಂತೆ ಭಾರತೀಯ ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಮೀನುಗಾರರು ಸಮುದ್ರದಿಂದ ದೋಣಿಯನ್ನು ಸ್ಥಳಾಂತರಿಸಿದ್ದಾರೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾರವಣ:
ನೆರೆಯ ತಮಿಳುನಾಡಿಗೆ ಇಂದು ಫೆಂಗಲ್ ಚಂಡಮಾರುತ ಅಪ್ಪಳಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುವ ಸಾಧ್ಯತೆಯಿದೆ.