Top Newsದೇಶ/ವಿದೇಶಸುದ್ದಿ

ಫೆಂಗಲ್ ಚಂಡಮಾರುತ ಅಬ್ಬರಕ್ಕೆ ನಿಯಂತ್ರಣ ತಪ್ಪಿದ Indigo ವಿಮಾನ..

ಚೆನ್ನೈ: ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ ಜೋರಾಗಿರುವಂತೆಯೇ ಇತ್ತ ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರಿ ದುರಂತವೊಂದು ತಪ್ಪಿದೆ.

 ಫೆಂಗಲ್ ಚಂಡಮಾರುತ ಅಪ್ಪಳಿಸಿದ್ದರಿಂದ ತಾತ್ಕಾಲಿಕವಾಗಿ ಸ್ಥಗಿತವಾಗಿದ್ದ ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಭಾನುವಾರ ಮುಂಜಾನೆ 4 ಗಂಟೆಯಿಂದ ಸೇವೆ ಆರಂಭಿಸಿದೆ. ಭಾರಿ ಮಳೆಯಲ್ಲಿ ಚೆನ್ನೈ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಸೇವೆ ಪುನಾರಂಭಗೊಂಡಿದ್ದು, ಈ ನಡುವೆ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಮಾಡುತ್ತಿದ್ದ ಇಂಡಿಗೋ ವಿಮಾನ ಕೂದಲೆಳೆ ಅಂತರದಲ್ಲಿ ಅಪಘಾತದಿಂದ ಪಾರಾಗಿದೆ.

ಇಂಡಿಗೋ ವಿಮಾನಯಾನ ಸಂಸ್ಥೆಗೆ ಸೇರಿದ ವಿಮಾನವೊಂದು ಚೆನ್ನೈ ವಿಮಾನ ನಿಲ್ದಾಣದಲ್ಲಿ ಇಳಿಯಲು ಯತ್ನಿಸಿದಾಗ ರನ್ ವೇ ಮೇಲೆ ವಿಮಾನ ಜಾರಿದ್ದು, ಕೂಡಲೇ ಎಚ್ಚೆತ್ತ ಪೈಲಟ್ ಮತ್ತೆ ವಿಮಾನವನ್ನು ಟೇಕ್ ಆಫ್ ಮಾಡುವ ಮೂಲಕ  ದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ.

ಚಂಡಮಾರುತದ ಪರಿಣಾಮ ತೀವ್ರವಾದ ಗಾಳಿಯಿಂದ ಅಲುಗಾಡುತ್ತಿರುವಂತೆ ಕಂಡುಬಂದ ವಿಮಾನವು ಇಳಿಯಲು ಸಾಧ್ಯವಾಗಲಿಲ್ಲ. ಈ ವೇಳೆ ಪೈಲಟ್ ಅನಿವಾರ್ಯವಾಗಿ ಮತ್ತೆ ವಿಮಾನವನ್ನು ಟೇಕ್ ಆಫ್ ಮಾಡಲಾಯಿತು. ಪೈಲಟ್ ನ ಸಮಯ ಪ್ರಜ್ಞೆ ಅದೃಷ್ಟವಶಾತ್ ಯಾವುದೇ ಅವಘಡ ಸಂಭವಿಸಿಲ್ಲ.

 

Comments (0)

Your email address will not be published. Required fields are marked *

Back to top button