Top Newsರಾಜಕೀಯರಾಜ್ಯಸುದ್ದಿ

ಬಿಜೆಪಿ ಪಕ್ಷವೇ ಬಸವಣ್ಣನವರ ವ್ಯಕ್ತಿತ್ವಕ್ಕೆ ಮಸಿ ಬಳಿಯುತ್ತಿದೆ; ಡಿ.ಕೆ. ಶಿವಕುಮಾರ್

ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಶಿವಕುಮಾರ್ ಅವರು ಪ್ರಶ್ನೆಗಳಿಗೆ ಉತ್ತರಿಸಿದರು. ಯತ್ನಾಳ್ ಅವರಂತಹ ಮುತ್ತು ರತ್ನವನ್ನು ಬಿಜೆಪಿಯವರು ತಮ್ಮ ಬಳಿಯೇ ಇಟ್ಟುಕೊಳ್ಳಲಿ. ಇದು ಆ ಪಕ್ಷದ ಆಂತರಿಕ ವಿಚಾರ. ಅದಕ್ಕೆ ನಾವು ತಲೆ ಹಾಕುವುದಿಲ್ಲ. ಇದು ಬಿಜೆಪಿ ಬಸವಣ್ಣನವರ ವಿರೋಧಿ ಎಂಬುದನ್ನು ನಿರೂಪಿಸುತ್ತದೆ” ಎಂದು ಹೇಳಿದರು. ಬಸವಣ್ಣನವರ ಬಗ್ಗೆ ಹುಚ್ಚರಂತೆ ಮಾತನಾಡಿರುವ ಯತ್ನಾಳ್ ಅವರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು ಎಂದು  ತಿಳಿಸಿದರು.

ಬಸವಣ್ಣನವರ ಚಿಂತನೆಯೇ ಕಾಂಗ್ರೆಸ್ ಪಕ್ಷದ ಚಿಂತನೆ. ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ಮುಖ್ಯಮಂತ್ರಿಗಳಾದಾಗ ಬಸವಣ್ಣನವರ ಜಯಂತಿಯಂದೇ ಪ್ರಮಾಣ ವಚನ ತೆಗೆದುಕೊಂಡರು. ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಕಡ್ಡಾಯ ಮಾಡಿದ್ದು, ಬಸವಣ್ಣನವರ ಜಯಂತಿಗೆ ಶಕ್ತಿ ಕೊಟ್ಟಿದ್ದು, ಅವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದ್ದು ನಮ್ಮ ಕಾಂಗ್ರೆಸ್ ಸರ್ಕಾರ. ಯಾವ ಜನತಾದಳ, ಬಿಜೆಪಿ, ಜನಸಂಘವೂ ಈ ಕೆಲಸ ಮಾಡಿಲ್ಲ” ಎಂದರು. “ನಮ್ಮ ಸಂವಿಧಾನದ ಮೂಲ ಶಕ್ತಿ ಹಾಗೂ ಆಶಯವಾದ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎನ್ನುವ ಚಿಂತನೆಯನ್ನು ಮೊದಲು ಪ್ರತಿಪಾದಿಸಿದವರು ಬಸವಣ್ಣನವರು. ನಮ್ಮ ಪಕ್ಷದ ಸಿದ್ಧಾಂತಕ್ಕೂ ಬಸವಣ್ಣನವರಿಗೂ ಅವಿನಾಭಾವ ಸಂಬಂಧವಿದೆ ಇದನ್ನು ನಾವು ಉಳಿಸಿ, ಬೆಳೆಸಿ, ರಕ್ಷಣೆ ಮಾಡಿಕೊಂಡು ಹೋಗುತ್ತೇವೆ” ಎಂದು ಹೇಳಿದರು.

ಯಡಿಯೂರಪ್ಪನವರು ಅವರ ಕ್ಷೇತ್ರದ ಕೆಲಸಗಳ ಕುರಿತು ಒಂದಷ್ಟು ಪತ್ರಗಳಿಗೆ ಸಹಿ ಹಾಕಿಸಿಕೊಂಡು ಹೋಗಿದ್ದರು” ಎಂದು ಹೇಳಿದರು. ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದಾಗ ನನ್ನ ಕ್ಷೇತ್ರದ ಕೆಲಸವನ್ನು ಮಾಡಿಕೊಡುವುದಾಗಿ ಸದನದಲ್ಲಿ ಮಾತು ಕೊಟ್ಟಿದ್ದರು. ಆದರೆ ಮಾಡಿಕೊಟ್ಟಿರಲಿಲ್ಲ. ಆದಕಾರಣ ನಾನೇ ಖುದ್ದಾಗಿ ಭೇಟಿ ಮಾಡಿದ್ದೆ. ನಾನು ಅವರ ಕ್ಷೇತ್ರಕ್ಕೆ ಕೆಲಸ ಮಾಡಿಕೊಡಬಹುದು, ಮುಂದಕ್ಕೂ ಮಾಡಬಹುದು. ಏಕೆಂದರೆ ಅದು ನನ್ನ ಕರ್ತವ್ಯ. ನಾನು ಸಚಿವನಾಗಿ ಪ್ರತಿಜ್ಞಾವಿಧಿ ಸ್ವೀಕಾರ ಮಾಡುವಾಗ, ಯಾವುದೇ ತಾರತಮ್ಯವಿಲ್ಲದೆ, ಸಂವಿಧಾನದ ಆಶಯಗಳ ಅಡಿಯಲ್ಲಿ ಕೆಲಸ ಮಾಡುತ್ತೇನೆ ಎಂದು ಪ್ರಮಾಣವಚನ ತೆಗೆದುಕೊಂಡಿರುತ್ತೇನೆ” ಎಂದರು. ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಅವರ ನಡುವೆ ಭಿನ್ನಾಭಿಪ್ರಾಯವಿದ್ದರೂ ಅವರು ತೋರಿಸಿಕೊಳ್ಳುತ್ತಿಲ್ಲ. “ನಾನು ಎಂದಿಗೂ ವ್ಯಕ್ತಿಗತವಾಗಿ ಹೋಗುವವನಲ್ಲ. ವ್ಯಕ್ತಿ ಪೂಜೆಯನ್ನೂ ಮಾಡುವವನಲ್ಲ. ಬದಲಾಗಿ ಪಕ್ಷದ ಪೂಜೆ ಮಾಡುವವನು. ನಾನು ಇಲ್ಲದೇ ಹೋದರೂ ಪಕ್ಷ ಇದ್ದೇ ಇರುತ್ತದೆ, ಕೊನೆಯದಾಗಿ ಪಕ್ಷವೇ ಮುಖ್ಯ” ಎಂದರು.

Comments (0)

Your email address will not be published. Required fields are marked *

Back to top button