Wednesday, January 28, 2026
27.9 C
Bengaluru
Google search engine
LIVE
ಮನೆ#Exclusive NewsTop Newsಎಚ್‌ಐವಿ ಸೋಂಕಿನ ಪ್ರಮಾಣದಲ್ಲಿ ಇಳಿಕೆ :ದಿನೇಶ್ ಗುಂಡೂರಾವ್

ಎಚ್‌ಐವಿ ಸೋಂಕಿನ ಪ್ರಮಾಣದಲ್ಲಿ ಇಳಿಕೆ :ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದಲ್ಲಿ ಏಡ್ಸ್ ಸೋಂಕು ನಿಯಂತ್ರಣಕ್ಕೆ ಬರುತ್ತಿದ್ದು, ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು  ಹೇಳಿದರು.

ಕಳೆದ ವರ್ಷ ರಾಜ್ಯದಲ್ಲಿ 13,183 ಪ್ರಕರಣಗಳು ವರದಿಯಾಗಿದ್ದು, ಈ ಸಾಲಿನ ಅಕ್ಟೋಬರ್‌ವರೆಗೆ 7,720 ಪ್ರಕರಣಗಳು ಪತ್ತೆಯಾಗಿವೆ. ಗರ್ಭಿಣಿಯರಲ್ಲಿ ಕಳೆದ ವರ್ಷ 539 ಸೋಂಕು, ಈ ವರ್ಷ ಅಕ್ಟೋಬರ್‌ವರೆಗೆ 247 ಸೋಂಕು ವರದಿಯಾಗಿವೆ. ಗರ್ಭಿಣಿ ಯರಲ್ಲಿ ಸೋಂಕು ದೃಢಪಡುವ ಪ್ರಮಾಣ ಶೇ.0.03ರಷ್ಟಿದೆ. ಇದನ್ನು ಶೂನ್ಯಕ್ಕೆ ಇಳಿಸುವ ಗುರಿಯೊಂದಿಗೆ ನಾವೆ ಲ್ಲರೂ ಕೆಲಸ ಮಾಡಬೇಕು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಟ್ರಕ್ ಚಾಲಕರು, ಕೆಲಸದ ಮೇಲೆ ಪ್ರಯಾಣ ಮಾಡುವವರು, ಲೈಂಗಿಕ ಕಾರ್ಯಕರ್ತರು, ಮಾದಕವಸ್ತುಗಳನ್ನು ಸ್ವೀಕರಿಸುವವರಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಿರುತ್ತದೆ. ಸುರಕ್ಷಿತ ಲೈಂಗಿಕ ಕ್ರಿಯೆಯೇ ಮಾರಣಾಂತಿಕ ಕಾಯಿಲೆಯಿಂದ ಪಾರಾಗಲು ದಾರಿ. ಲೈಂಗಿಕ ಕಾರ್ಯಕರ್ತೆಯರನ್ನು ಸಮಾಜದ ಮುಖ್ಯ ವಾಹಿನಿಯಿಂದ ಹೊರಗೆ ಇಟ್ಟಿರುವ ಕಾರಣ ಗಂಡಾಂತರಗಳು ಉಂಟಾಗುತ್ತಿವೆ. ಆದರೆ, ಅವರನ್ನು ಮಾನವೀಯತ ದೃಷ್ಟಿಯಿಂದ ನೋಡದಿದ್ದರೆ ಏಡ್ಸ್ ನಿಯಂತ್ರಣ ಅಸಾಧ್ಯ ಎಂದು ತಿಳಿಸಿದರು.

ರಾಜ್ಯದಲ್ಲಿ 433 ಆಪ್ತ ಸಮಾಲೋಚನಾ ಮತ್ತು ಪರೀಕ್ಷಾ ಕೇಂದ್ರಗಳಿವೆ. 2592 ಸೌಲಭ್ಯಾಧಾರಿತ ಸಮಗ್ರ ಆಪ್ತ ಸಮಾಲೋಚನಾ ಮತ್ತು ಪರೀಕ್ಷಾ ಕೇಂದ್ರಗಳಿವೆ. ಅಲ್ಲಿ ನೀಡುತ್ತಿರುವ ಚಿಕಿತ್ಸೆ, ಥೆರಪಿಗಳಿಂದಾಗಿ ಇಳಿಕೆಯಾಗಿದೆ. ಇಷ್ಟಕ್ಕೆ ಸುಮ್ಮನಾಗದೇ ಎಚ್‌ಐವಿ/ಏಡ್ಸ್‌ ಪತ್ತೆಯೇ ಇಲ್ಲ ಎಂದು ಆಗುವವರೆಗೆ ಕೆಲಸ ಮಾಡಬೇಕು ಎಂದರು.

 

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments