Top Newsಮನರಂಜನೆರಾಜ್ಯಸುದ್ದಿ

5 ಕೋಟಿ ರೂ. ವಂಚನೆ ಪ್ರಕರಣ; ನೋಟಿಸ್ ಹಿನ್ನೆಲೆ ಕೋರ್ಟ್​​ಗೆ ಹಾಜರಾದ ಚೈತ್ರಾ ಕುಂದಾಪುರ

ಚೈತ್ರಾ ಕುಂದಾಪುರ ಮೇಲೆ ಹಲವು ಕೇಸ್​ಗಳು ಇವೆ. ಆ ಪೈಕಿ ಎಂಎಲ್​​ಎ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂಪಾಯಿ ವಂಚನೆ ಮಾಡಿದ ಪ್ರಕರಣ ಕೂಡ ಒಂದು. ಈ ಪ್ರಕರಣ ಸದ್ಯ ಕೋರ್ಟ್ ಅಂಗಳದಲ್ಲಿ ಇದೆ. ಈ ಪ್ರಕರಣದಲ್ಲಿ ವಾರಂಟ್​ ಜಾರಿಯಾದ ಹಿನ್ನೆಲೆಯಲ್ಲಿ ಚೈತ್ರಾ ಕುಂದಾಪುರ ಅವರು ಬಿಗ್ ಬಾಸ್​ನಿಂದ ಹೊರ ಬಂದು ಕೋರ್ಟ್ ಮೆಟ್ಟಿಲೇರಿದ್ದಾರೆ.

ಕುಂದಾಪುರದ ಉದ್ಯಮಿ ಗೋವಿಂದಬಾಬು ಪೂಜಾರಿಗೆ ವಂಚಿಸಿದ್ದ ಆರೋಪ ಚೈತ್ರಾ ಹಾಗೂ ಗ್ಯಾಂಗ್ ಮೇಲೆ ಇದೆ. ಟಿಕೆಟ್ ಕೊಡಿಸೋದಾಗಿ ಚೈತ್ರಾ ವಂಚನೆ ಮಾಡಿದ್ದರು. ಇದಕ್ಕಾಗಿ ಅವರು ಐದು ಕೋಟಿ ರೂಪಾಯಿ ಪಡೆದಿದ್ದರು ಎನ್ನಲಾಗಿದೆ. ಈ ಪ್ರಕರಣದಲ್ಲಿ ಚೈತ್ರಾ, ಶ್ರೀಕಾಂತ್ ಸೇರಿ ಮೂವರು ಆರೋಪಿಗಳು ಕೋರ್ಟ್​ಗೆ ಹಾಜರು ಹಾಕಿದ್ದಾರೆ.

ಚೈತ್ರಾ ಬಿಗ್​ಬಾಸ್ ಮನೆಯಿಂದ ನೇರವಾಗಿ ನ್ಯಾಯಾಲಯಕ್ಕೆ ಬಂದಿದ್ದಾರೆ. ವಾರಂಟ್ ರೀಕಾಲ್ ಮಾಡಿಕೊಂಡು ಮತ್ತೆ ಬಿಗ್ ಬಾಸ್ ಮನೆಗೆ ತೆರಳಿದ್ದಾರೆ. ಅಲ್ಲಿ ಅವರು ಆಟ ಮುಂದುವರಿಸಲಿದ್ದಾರೆ. ಸದ್ಯ ಕೋರ್ಟ್ ಮುಂದಿನ ವರ್ಷ ಜನವರಿ 13ಕ್ಕೆ ವಿಚಾರಣೆ ಮುಂದೂಡಿದೆ. ಅಲ್ಲಿಯವರೆಗೆ ಬಿಗ್ ಬಾಸ್ ಮನೆಯಲ್ಲೇ ಚೈತ್ರಾ ಇದ್ದರೆ ಮತ್ತೊಮ್ಮೆ ಅವರು ವಿಚಾರಣೆಗೆ ಹಾಜರಾಗಬೇಕಾಗುತ್ತದೆ.

Comments (0)

Your email address will not be published. Required fields are marked *

Back to top button