ಏನಿದು ಪ್ರಕರಣ
ಫ್ಯಾಷನ್ ಡಿಸೈನರ್ ಆಗಿದ್ದ ಸಂಧ್ಯಾ ಅವರು ಬಟ್ಟೆ ಅಂಗಡಿಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು. ನವೆಂಬರ್ 02 ರಂದು ಕೆಲಸ ಮುಗಿಸಿ ರಾತ್ರಿ 7 ಗಂಟೆ ಸುಮಾರಿಗೆ ಕೆಂಗೇರಿ ಬಸ್ ನಿಲ್ದಾಣದ ಬಳಿ ರಸ್ತೆ ದಾಟುತ್ತಿದ್ದರು. ಈ ವೇಳೆ ಮಧ್ಯದ ಅಮಲಿನಲ್ಲಿ ಬೆಂಜ್ ಕಾರು ಚಲಾಯಿಸಿಕೊಂಡು ಬಂದ ಧನುಷ್ ಕೆಂಗೇರಿ ಬಸ್ ನಿಲ್ದಾಣದ ಬಳಿ ಬಂದಾಗ ಹಂಪ್ ಅನ್ನೂ ಎಗರಿಸಿ ಸಂಧ್ಯಾ ಅವರಿಗೆ ಡಿಕ್ಕಿ ಹೊಡೆದಿದ್ದನು.
ಕಾರು ಸಂಧ್ಯಾ ಅವರನ್ನು 5 ಮೀಟರ್ ಉಜ್ಜಿಕೊಂಡು ಹೋಗಿತ್ತು. ಕಾರು ಡಿಕ್ಕಿ ಹೊಡೆದಿದ್ದರಿಂದ ಕೆಳಗೆ ಬಿದ್ದ ಸಂಧ್ಯಾ ತಲೆಗೆ ತೀವ್ರ ಪೆಟ್ಟಾಗಿ, ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಅಪಘಾತದ ಬಳಿಕ ಧನುಷ್ ಪರಾರಿಯಾಗಲು ಯತ್ನಿಸಿದ್ದನು. ಆಗ, ಸ್ಥಳೀಯರು ಧನುಷ್ನನ್ನು ಹಿಡಿದು, ಪೊಲೀಸರಿಗೆ ಒಪ್ಪಿಸಿದ್ದರು. ಕೆಂಗೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಆರೋಪಿ ಧನುಷ್ನನ್ನು ಬಂಧಿಸಿದ್ದಾರೆ.