#Exclusive NewsTop Newsಸುದ್ದಿ

ದೆಹಲಿ-ಹರಿಯಾಣ ಗಡಿಯಲ್ಲಿ ರೈತರ ಬೃಹತ್ ಪ್ರತಿಭಟನೆ; ಶಂಭು ಗಡಿಯಲ್ಲಿ ಟ್ರಾಫಿಕ್ ಜಾಮ್ ಭೀತಿ

ನವದೆಹಲಿ: ಇಂದು ದೆಹಲಿ-ಹರಿಯಾಣ ಗಡಿಯಲ್ಲಿ ರೈತರ ಪ್ರತಿಭಟನೆ ನಡೆಯಲಿದ್ದು, ಶಂಭು ಗಡಿಯಲ್ಲಿ ರೈತರು ಜಮಾವಣೆಗೊಂಡಿದ್ದಾರೆ. ಬೃಹತ್‌ ಪ್ರತಿಭಟನೆ ಹಿನ್ನೆಲೆ ದೆಹಲಿಯಲ್ಲಿ ಟ್ರಾಫಿಕ್‌ ಜಾಮ್‌ ಭೀತಿ ಶುರುವಾಗಿದೆ.
ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಪ್ರತಿಭಟನೆ ಆರಂಭವಾಗಲಿದೆ. ಪ್ರತಿಭಟನೆ ಹಿನ್ನೆಲೆ ಶಂಭು ಗಡಿಯಲ್ಲಿ ರೈತರು ಜಮಾವಣೆಗೊಂಡಿದ್ದಾರೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿಂದೆ ದೆಹಲಿ ಉತ್ತರ ಪ್ರದೇಶ ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸಿದ್ದರು.
ಶಂಭು ಗಡಿ ಪ್ರತಿಭಟನಾ ಸ್ಥಳದಿಂದ ದೆಹಲಿಯ ಸಂಸತ್ ಭವನಕ್ಕೆ ಪಾದಯಾತ್ರೆ ಮಧ್ಯಾಹ್ನ 1 ಗಂಟೆಗೆ ಪ್ರಾರಂಭವಾಗುವ ನಿರೀಕ್ಷೆಯಿದೆ. ರೈತರು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಬ್ಯಾನರ್ ಅಡಿಯಲ್ಲಿ ಪ್ರತಿಭಟನೆ ನಡೆಯುತ್ತಿದೆ.

ಫೆಬ್ರವರಿ 13 ರಿಂದ ರೈತರು ಶಂಭು ಮತ್ತು ಖಾನೌರಿ ಗಡಿ ಬಿಂದುಗಳ ಗಡಿಯಲ್ಲಿ ಮೊಕ್ಕಾಂ ಹೂಡಿದ್ದಾರೆ. ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ (MSP) ಕಾನೂನು ಖಾತರಿಯನ್ನು ಕೋರುತ್ತಿದ್ದಾರೆ, ಸಾಲ ಮನ್ನಾ, ರೈತರು ಮತ್ತು ಕೃಷಿಗೆ ಪಿಂಚಣಿ ಸೇರಿದಂತೆ ಇತರ ಬೇಡಿಕೆಗಳಿವೆ. 2021 ರ ಲಖಿಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ “ನ್ಯಾಯ”, 2013 ರ ಭೂ ಸ್ವಾಧೀನ ಕಾಯಿದೆಯ ಮರುಸ್ಥಾಪನೆ ಮತ್ತು 2020-21 ರಲ್ಲಿ ಹಿಂದಿನ ಆಂದೋಲನದ ಸಮಯದಲ್ಲಿ ರೈತರ ಕುಟುಂಬಗಳಿಗೆ ಪರಿಹಾರವನ್ನು ಸಹ ರೈತರು ಬೇಡಿಕೆಯಿಟ್ಟಿದ್ದರು.

ರೈತರು ಈ ಹಿಂದೆ ಫೆಬ್ರವರಿ 13 ಮತ್ತು ಫೆಬ್ರವರಿ 21 ರಂದು ರಾಷ್ಟ್ರ ರಾಜಧಾನಿಗೆ ಮೆರವಣಿಗೆ ನಡೆಸಲು ಪ್ರಯತ್ನಿಸಿದ್ದರು, ಆದರೆ ಅವರನ್ನು ಪಂಜಾಬ್-ಹರಿಯಾಣ ಗಡಿಯಲ್ಲಿರುವ ಶಂಭು ಮತ್ತು ಖಾನೌರಿ ಗಡಿಯಲ್ಲಿ ಭದ್ರತಾ ಪಡೆಗಳು ತಡೆದಿದ್ದರು.

ರೈತರ ಬೇಡಿಕೆಗಳೇನು?
* ಎಂಎಸ್‌ಪಿಗೆ ಕಾನೂನುಬದ್ಧ ಖಾತರಿ
* ರೈತರು ಸಾಲ ಮನ್ನಾ
* ರೈತರು ಮತ್ತು ರೈತ ಕಾರ್ಮಿಕರಿಗೆ ಪಿಂಚಣಿ ವ್ಯವಸ್ಥೆ
* ವಿದ್ಯುತ್ ದರವನ್ನು ಹೆಚ್ಚಿಸಬಾರದು
* 2021 ರ ಲಖಿಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ನ್ಯಾಯ
* 2013 ರ ಭೂ ಸ್ವಾಧೀನ ಕಾಯಿದೆಯನ್ನು ಮರುಸ್ಥಾಪಿಸಲು ಒತ್ತಾಯ
* 2020-21 ರಲ್ಲಿ ಹಿಂದಿನ ಆಂದೋಲನದ ಸಂದರ್ಭದಲ್ಲಿ ಸಾವನ್ನಪ್ಪಿದ ರೈತರ ಕುಟುಂಬಗಳಿಗೆ ಪರಿಹಾರಕ್ಕೆ ಒತ್ತಾಯ

Comments (0)

Your email address will not be published. Required fields are marked *

Back to top button