ಡಿಸೆಂಬರ್ 8 ರಂದು ಕರ್ನಾಟಕ ಲೋಕಸೇವಾ ಆಯೋಗದ ಪಿಡಿಓ ಪರೀಕ್ಷೆ ನಡೆಯಲಿದೆ. ಭಾನುವಾರ ಬೆಳಗ್ಗೆ 7 ಗಂಟೆ ಬದಲಾಗಿ, ಬೆಳಗ್ಗೆ 5:30 ರಿಂದ ಮೆಟ್ರೋ ರೈಲುಗಳ ಸಂಚಾರ ಆರಂಭಗೊಳ್ಳಲಿದೆ.
ಡಿಸೆಂಬರ್ 8 ರಂದು ಪಂಚಾಯಿತಿ ಅಭಿವೃದ್ದಿ ಅಧಿಕಾರಿ ನೇಮಕ ಪರೀಕ್ಷೆ ನಡೆಯಲಿದೆ. ನೇರಳೆ ಹಾಗೂ ಹಸಿರು ಮಾರ್ಗದಲ್ಲಿ ಮುಂಜಾನೆ 5- 30 ಕ್ಕೆ ಮೆಟ್ರೋ ರೈಲುಗಳ ಸಂಚಾರ ಆರಂಭಗೊಳ್ಳಲಿದೆ ಅಭ್ಯರ್ಥಿಗಳ ಅನುಕೂಲಕ್ಕೆ ಅವಧಿಗೂ ಮುನ್ನವೇ ಮೆಟ್ರೋ ಸೇವೆ ಆರಂಭಿಸಿದ ಬಿಎಂಆರ್ಸಿಎಲ್ ಬೆಂಗಳೂರು ಮೆಟ್ರೋ ನಿಗಮದಿಂದ ಪತ್ರಿಕಾ ಪ್ರಕಟಣೆ ಹೊರಡಿಸಿದೆ.
ಪ್ರತಿ ಭಾನುವಾರ ಬೆಳಗ್ಗೆ 7 ಗಂಟೆಯಿಂದ ಮೆಟ್ರೋ ರೈಲುಗಳು ಸಂಚಾರ ಆರಂಭವಾಗುತ್ತದೆ. ಆದರೆ ಪಿಡಿಓ ಪರೀಕ್ಷೆ ಹಿನ್ನೆಲೆಯಲ್ಲಿ ಈ ಭಾನುವಾರ ಬೆಳಗ್ಗೆ 5:30 ರಿಂದ ಮೆಟ್ರೋ ರೈಲುಗಳ ಸಂಚಾರ ಮಾಡುವುದಾಗಿ ಬಿಎಂಆರ್ಸಿಎಲ್ ಮಾಧ್ಯಮ ಪ್ರಕಟಣೆ ಹೊರಡಿಸಿದೆ.ಡಿಸೆಂಬರ್ ರಂದು(ಭಾನುವಾರ) ಕನಾಟಕ ಲೋಕಸೋವಾ ಆಯೋಗವು-ಪಂಚಾಯತ್ ಅಭಿವೃದ್ಧಿ ಅಧಿಕಾರಿ(ಪಿಡಿಒ) ಹುದ್ದೆ ಪರೀಕ್ಷೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಸಮಯಕ್ಕೆ ಸರಿಯಾಗಿ ಪರೀಕ್ಷೆಗೆ ಹಾಜರಾಗಲು ಬಿಎಂಆರ್ಸಿಎಲ್ ಮೆಟ್ರೋ ರೈಲು ಸೇವೆಯನ್ನು ಬೆಳಗ್ಗೆ 07:00 ಗಂಟೆಗೆ ಬದಲಾಗಿ 05:30 ಗಂಟೆಗೆ ಎಲ್ಲಾ ನಾಲ್ಕು ಟರ್ಮಿನಲ್ ನಿಲ್ದಾಣಗಳಾದ ಮಾದಾವರ, ಚಲ್ಲಘಟ್ಟ ಮತ್ತು ವೈಟ್ ಫೀಲ್ಡ್(ಕಾಡುಗೋಡಿ) ಮೆಟ್ರೋ ನಿಲ್ದಾಣಗಳಿಂದ ಪ್ರಾರಂಭಿಸಲಿದೆ. ಅಲ್ಲದೆ, ನಾಡಪ್ರಭು ಕೆಂಪೇಗೌಡ ನಿಲ್ದಾಣ, ಮೆಜೆಸ್ಟಿಕನಿಂದ ಎಲ್ಲಾ ನಾಲ್ಕು ದಿಕ್ಕಿಗೆ ಮೊದಲ ರೈಲು ಬೆಳಗ್ಗೆ 5:30 ಗಂಟೆಗೆ ಹೊರಡಲಿದೆ ಎಂದು ಬಿಎಂಆರ್ ಸಿಎಲ್ ತಿಳಿಸಿದೆ.