Top Newsದೇಶ/ವಿದೇಶಸುದ್ದಿ

ಸಿರಿಯಾದಿಂದ ಹೊರಡುವಂತೆ ಭಾರತೀಯ ಪ್ರಜೆಗಳಿಗೆ ಕೇಂದ್ರ ಸರ್ಕಾರ ಸೂಚನೆ

ಸಿರಿಯಾದಲ್ಲಿ ರಾಜಕೀಯ ಪ್ರಕ್ಷುಬ್ಧತೆ ಉಂಟಾಗಿದ್ದು, ಅಲ್ಲಿ ಯುದ್ಧ ಪರಿಸ್ಥಿತಿ ನಿರ್ಮಾಣವಾಗಿದೆ. ಈ ತಕ್ಷಣವೇ ಸಿರಿಯಾವನ್ನು ತೋರೆಯುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಇದರ ಜತೆಗೆ ಸಿರಿಯಾ ಟರ್ಕಿಯಿಂದ ಬೆಂಬಲಿತವಾಗಿರುವ ಬಂಡುಕೋರ ಗುಂಪುಗಳು ಮತ್ತು ಮಿಲಿಷಿಯಾಗಳಿಂದ ಸುತ್ತುವರಿದಿದೆ. ಹೀಗಾಗಿ ತಕ್ಷಣ ಸಿರಿಯಾವನ್ನು ಬಿಟ್ಟು ಭಾರತಕ್ಕೆ ಬರುವಂತೆ ಸೂಚನೆ ನೀಡಲಾಗಿದೆ.

ಇಸ್ಲಾಮಿಕ್ ಬಂಡುಕೋರರು ಹಾಗೂ ಸಿರಿಯಾ ಸರ್ಕಾರದ ವಿರುದ್ಧದ ಅಂತರ್ಯುದ್ಧ ತಾರಕಕ್ಕೇರಿದ್ದು, ಇದರ ಪರಿಣಾಮ ಸಿರಿಯಾದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಇದೀಗ ಸಿರಿಯಾದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿರುವ  ಭಾರತೀಯ ವಿದೇಶಾಂಗ ಸಚಿವಾಲಯ ಡಿಸೆಂಬರ್ 6ರ ಮಧ್ಯರಾತ್ರಿ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಸಿರಿಯಾಗೆ ಅಥವಾ ಸಿರಿಯಾ ಮೂಲಕ ಯಾರೂ ಪ್ರಯಾಣಿಸಬೇಡಿ ಎಂದು ಎಚ್ಚರಿಸಿದೆ.

ಸಿರಿಯಾದಲ್ಲಿನ ಪರಿಸ್ಥಿತಿ ಹದಗೆಡುತ್ತಿದ್ದು, ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಆದೇಶದವರೆಗೂ ಭಾರತೀಯ ಪ್ರಜೆಗಳು ಸಿರಿಯಾ ಭೇಟಿಯನ್ನು ನಿಯಂತ್ರಿಸಬೇಕು. ಪ್ರಸ್ತುತ ಸಿರಿಯಾದಲ್ಲಿರುವ ಭಾರತೀಯ ಪ್ರಜೆಗಳು ಡಮಾಸ್ಕಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಿ.ಸಿರಿಯಾದಲ್ಲಿ ಭುಗಿಲೆದ್ದ ಹಿಂಸಾಚಾರ: ಈ ಕೂಡಲೇ ಹೊರಡಿ; ಸಿರಿಯಾದಲ್ಲಿರುವ ಭಾರತೀಯರಿಗೆ ವಿದೇಶಾಂಗ ಸಚಿವಾಲಯ ಸೂಚನೆ! ಸಿರಿಯಾದಲ್ಲಿ ರಷ್ಯಾ ಹಾಗೂ ಇರಾನ್ ಬೆಂಬಲಿತ ಬಶರ್ ಅಲ್ ಅಸ್ಸಾದ್ ನೇತೃತ್ವದ ಸರ್ಕಾರವಿದೆ. ಆದರೆ, ಈ ಸರ್ಕಾರ ವಿರುದ್ಧ ಸ್ಥಳೀಯ ಇಸ್ಲಾಮಿಕ್ ಭಯೋತ್ಪಾದಕ ಗುಂಪು ತಿರುಗಿ ಬಿದ್ದಿದೆ.

ಸಿರಿಯಾದಲ್ಲಿ ರಷ್ಯಾ ಹಾಗೂ ಇರಾನ್ ಬೆಂಬಲಿತ ಬಶರ್ ಅಲ್ ಅಸ್ಸಾದ್ ನೇತೃತ್ವದ ಸರ್ಕಾರವಿದೆ.  ಈ ಸರ್ಕಾರ ವಿರುದ್ಧ ಸ್ಥಳೀಯ ಇಸ್ಲಾಮಿಕ್ ಭಯೋತ್ಪಾದಕ ಗುಂಪು ತಿರುಗಿ ಬಿದ್ದಿದೆ. ಟರ್ಬಿ ಬೆಂಬಿಲಿತ ಈ ಇಸ್ಲಾಮಿಕ್ ಬಂಡಾಯ ಗುಂಪು ಕಳೆದ ವಾರ ಸಿರಿಯಾ ಅಧ್ಯಕ್ಷ ಬಶರ್ ಅಲ್ ಅಸ್ಸಾದ್ ಕಿತ್ತೆಸೆಯುವ ಎಚ್ಚರಿಕೆ ನೀಡಿತ್ತು. ಸಿರಿಯಾದ ಹಲವು ನಗರಗಳ ಮೇಲೆ ಈ ಗುಂಪು ದಾಳಿ ನಡೆಸಿದೆ. ಭಾರೀ ಹಿಂಸಾಚಾರದ ಮೂಲಕ ನಗರಗಳನ್ನು ವಶಕ್ಕೆ ಪಡೆದಿದ್ದಾರೆ. ಇದೀಗ ಸರ್ಕಾರದ ಪ್ರಮುಖ ಕೇಂದ್ರಗಳನ್ನು ಗುರಿ ಮಾಡಿಕೊಂಡಿದ್ದಾರೆ.

 

Comments (0)

Your email address will not be published. Required fields are marked *

Back to top button