ಬೆಂಗಳೂರು: ಕ್ರೀಡೆಗಳನ್ನು ಉತ್ತೇಜಿಸಲು ಮತ್ತು ಕ್ರೀಡಾಪಟುಗಳಿಗೆ ವಿಶ್ವದರ್ಜೆಯ ಮಟ್ಟದ ಸೌಲಭ್ಯಗಳನ್ನು ಒದಗಿಸಲು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ರಾಷ್ಟ್ರೀಯ ಕ್ರೀಡಾ ಅಭಿವೃದ್ಧಿ ನಿಧಿ (NSDF) ಮತ್ತು ಭಾರತೀಯ ಕ್ರೀಡಾ ಪ್ರಾಧಿಕಾರ (SAI) ಯೊಂದಿಗೆ ದೇಶೀ ನಿರ್ಮಿತ ಹೆಚ್ ಎಎಲ್-ಎಸ್ ಎಐ ಹೈ ಪರ್ಫಾರ್ಮೆನ್ಸ್ ಸೆಂಟರ್ ನ್ನು ಎಸ್ ಎಐ ನೇತಾಜಿ ಸುಭಾಸ್ ದಕ್ಷಿಣ ಕೇಂದ್ರದಲ್ಲಿ ಸ್ಥಾಪನೆಗೆ ತಿಳುವಳಿಕೆ ಒಪ್ಪಂದಕ್ಕೆ ಸಹಿ ಹಾಕಿದೆ. ಹೆಚ್ ಎಎಲ್ ನ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ (CSR) ಉಪಕ್ರಮಗಳ ಅಡಿಯಲ್ಲಿ, ಕಂಪನಿಯು ಬೆಂಗಳೂರಿನಲ್ಲಿ ಹೆಚ್ ಎಎಲ್ -ಎಸ್ ಎಐ ಹೈ ಪರ್ಫಾರ್ಮೆನ್ಸ್ ಸೆಂಟರ್ ಸ್ಥಾಪನೆಗೆ ಬದ್ಧವಾಗಿದೆ. ಈ ಕೇಂದ್ರವು ಕ್ರೀಡಾಪಟುಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಬಳಸಿಕೊಳ್ಳುತ್ತದೆ.
ಹೆಚ್ ಎಎಲ್ ನ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ (CSR) ಉಪಕ್ರಮಗಳ ಅಡಿಯಲ್ಲಿ, ಕಂಪನಿಯು ಬೆಂಗಳೂರಿನಲ್ಲಿ ಹೆಚ್ ಎಎಲ್ -ಎಸ್ ಎಐ ಹೈ ಪರ್ಫಾರ್ಮೆನ್ಸ್ ಸೆಂಟರ್ ಸ್ಥಾಪನೆಗೆ ಬದ್ಧವಾಗಿದೆ. ಈ ಕೇಂದ್ರವು ಕ್ರೀಡಾಪಟುಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಬಳಸಿಕೊಳ್ಳುತ್ತದೆ.
ಇದು ಆಂಥ್ರೊಪೊಮೆಟ್ರಿ, ಬಯೋಮೆಕಾನಿಕ್ಸ್, ವ್ಯಾಯಾಮ ಬಯೋಕೆಮಿಸ್ಟ್ರಿ, ನ್ಯೂಟ್ರಿಷನ್, ಸ್ಪೋರ್ಟ್ಸ್ ಫಿಸಿಯಾಲಜಿ, ಸೈಕಾಲಜಿ, ಸ್ಟ್ರೆಂತ್ & ಕಂಡೀಷನಿಂಗ್, ಸ್ಪೋರ್ಟ್ಸ್ ಮೆಡಿಸಿನ್, ಫಿಸಿಯೋಥೆರಪಿ ಮತ್ತು ಇತರ ಕ್ಷೇತ್ರಗಳಲ್ಲಿ ಸೌಲಭ್ಯಗಳನ್ನು ಒದಗಿಸುತ್ತದೆ. ಈ ಅತ್ಯಾಧುನಿಕ ಸೌಲಭ್ಯದೊಂದಿಗೆ, ಕ್ರೀಡಾಪಟುಗಳು ತಮ್ಮ ಪ್ರದರ್ಶನವನ್ನು ಹೆಚ್ಚಿಸುವುದರೊಂದಿಗೆ ಒಲಿಂಪಿಕ್ಸ್ ಸೇರಿದಂತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಯಶಸ್ವಿಯಾಗಲು ಅವಕಾಶಗಳನ್ನು ಹೊಂದಿರುತ್ತಾರೆ.