Wednesday, January 28, 2026
27.9 C
Bengaluru
Google search engine
LIVE
ಮನೆ#Exclusive News'ಉಚಿತ ಭಾಗ್ಯಗಳು ಯಾವುದೇ ಕಾರಣಕ್ಕೂ ನಿಲ್ಲಲ್ಲ' ಜನರಿಗೆ 'ಗ್ಯಾರಂಟಿ' ಭರವಸೆ ಕೊಟ್ಟ ಸಿದ್ದರಾಮಯ್ಯ

‘ಉಚಿತ ಭಾಗ್ಯಗಳು ಯಾವುದೇ ಕಾರಣಕ್ಕೂ ನಿಲ್ಲಲ್ಲ’ ಜನರಿಗೆ ‘ಗ್ಯಾರಂಟಿ’ ಭರವಸೆ ಕೊಟ್ಟ ಸಿದ್ದರಾಮಯ್ಯ

ಹಾವೇರಿ: ಯಾವುದೇ ಕಾರಣಕ್ಕೂ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಯಾರಿಂದಲೂ ಬಿಪಿಎಲ್ ಕಾರ್ಡ್ ಕಸಿಯುವುದಿಲ್ಲ. ಉಪಚುನಾವಣೆ ವೇಳೆ ಕೋಮು ಸೌಹಾರ್ದತೆ ಮೆರೆದ ಶಿಗ್ಗಾಂವಿ  ಜನತೆಗೆ ಧನ್ಯವಾದ ಎಂದು  ಸಿದ್ದರಾಮಯ್ಯ ಅವರು ಹೇಳಿದರು.

ಬಳಿಕ ಮಾತನಾಡಿದ ಅವರು, ದೇಶದಲ್ಲಿ ಬಿಜೆಪಿ ಆಡಳಿತ ಇರುವ ಯಾವುದೇ ರಾಜ್ಯದ್ಲೂ ಜನರಿಗೆ 10 ಕೆಜಿ ಅಕ್ಕಿ ಕೊಡುತ್ತಿಲ್ಲ. ಯಾವುದಾದರೂ ರಾಜ್ಯದಲ್ಲಿ 10 ಕೆಜಿ ಅಕ್ಕಿ ಕೊಟ್ಟಿದ್ದನ್ನು ಬಿಜೆಪಿಗರು ತೋರಿಸಿದ್ದೇ , ಈಗಲೇ ರಾಜೀನಾಮೆ ಕೊಟ್ಟು ಹೋಗುತ್ತೇನೆ. ಯಡಿಯೂರಪ್ಪ, ಬೊಮ್ಮಾಯಿಯವರೇ, ನಾನು ಕೊಟ್ಟಿದ್ದ 7 ಕೆಜಿ ಅಕ್ಕಿಯನ್ನು 4 ಕೆಜಿಗೆ ಇಳಿಸಿದ್ದು ಯಾರಪ್ಪಾ? ಬಿಜೆಪಿಗೆ ಬಡವರ ಬಗ್ಗೆ ಮಾತನಾಡುವ ಯಾವುದೇ ನೈತಿಕತೆಯೂ ಇಲ್ಲ. ಇಡೀ ದೇಶದಲ್ಲಿ ಕರ್ನಾಟಕದಲ್ಲಿ ಮಾತ್ರ 10 ಕೆಜಿ ನೀಡಲಾಗುತ್ತಿದೆ. ರೂ.34 ಕೊಡುತ್ತೇವೆ ಅಕ್ಕಿ ಕೊಡಿ ಎಂದರೆ ಕೇಂದ್ರ ಸರ್ಕಾರ ಅಕ್ಕಿ ಕೊಡಲಿಲ್ಲ. ಹೀಗಾಗಿ 5 ಕೆಜಿ ಬದಲಾಗಿ ಹಣ ಕೊಡುತ್ತಿದ್ದೇವೆ. ನಾವು ಯಾವುದೇ ಕಾರಣಕ್ಕೂ ಒಂದು ಕೆಜಿ ಅಕ್ಕಿಯನ್ನೂ ಕಡಿಮೆ ಮಾಡಲ್ಲ. ಎಷ್ಟೇ ಹಣ ಖರ್ಚಾದರೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಪುನರುಚ್ಛರಿಸಿದರು.

2028ಕ್ಕೂ ನಾವೇ ಅಧಿಕಾರಕ್ಕೆ ಬರುತ್ತೇವೆ. ಆಗಲೂ ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸುತ್ತೇವೆ. ಕೇಂದ್ರ ಸರ್ಕಾರ ನಮಗೆ ನ್ಯಾಯಯುತವಾಗಿ ಕೊಡಬೇಕಾದ ಹಣವನ್ನು ಸರಿಯಾಗಿ ಕೊಡುತ್ತಿಲ್ಲ. ತೆರಿಗೆ ಪಾಲು ಕೊಡುತ್ತಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಿಗೂ ಸರಿಯಾಗಿ ಹಣ ಕೊಡುತ್ತಿಲ್ಲ. ಹಣ ಸಿಗದಂತೆ ಮಾಡಿ ನಮಗೆ ತೊಂದರೆ ಮಾಡುತ್ತಿದ್ದಾರೆ. ಎಷ್ಟೇ ಹಣಕಾಸಿನ ತೊಂದರೆ ಕೊಟ್ಟರೂ ಗ್ಯಾರಂಟಗಳನ್ನು ನಿಲ್ಲಿಸುವುದಿಲ್ಲ ಎಂದು ಘೋಷಿಸಿದರು.

ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದೇವೆ. ಹೀಗಾಗಿ, ಗೆದ್ದೇ ಗೆಲ್ಲುತ್ತೇವೆಂದು ಹೇಳಿದ್ದೆ. ಈ ಕ್ಷೇತ್ರದ ಜನ ಜಾತಿ, ಧರ್ಮ ನೋಡಲ್ಲ. ಕಾಂಗ್ರೆಸ್ ಕಾರ್ಯಕ್ರಮ, ಸಿದ್ಧಾಂತ ನೋಡಿ ಮತ ಹಾಕುತ್ತಾರೆಂಬ ಧೈರ್ಯ ಇತ್ತು. ನಮ್ಮ ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ ಮೋದಿ ಸೇರಿ ಬಿಜೆಪಿಗರು ಅಪಪ್ರಚಾರ ಮಾಡಿದ್ದರು. ಈಗ ಎಲ್ಲಾ ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದೇವೆ. ಮಧ್ಯವರ್ತಿಗಳು ಇಲ್ಲದೇ ಜನರಿಗೆ ನೇರವಾಗಿ ಹಣ ತಲುಪುತ್ತಿದೆ. ರಾಜ್ಯದ 4.5 ಕೋಟಿ ಜನರಿಗೆ ನಮ್ಮ ಕಾರ್ಯಕ್ರಮ ತಲುಪುತ್ತಿವೆ. ಪ್ರತಿ ಕುಟುಂಬಕ್ಕೆ ಪ್ರತಿ ವರ್ಷ ರೂ.45-50 ಸಾವಿರ ಸಿಗುತ್ತಿದೆ. ಪ್ರತಿ ವರ್ಷ ರೂ.56 ಸಾವಿರ ಕೋಟಿ ಅನುದಾನ ಗ್ಯಾರಂಟಿ ಯೋಜನೆಗಳಿಗೆ ಹೋಗುತ್ತಿದೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments