#Exclusive NewsTop Newsರಾಜಕೀಯರಾಜ್ಯಸುದ್ದಿ

ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿ: ಆದಿತ್ಯ ಠಾಕ್ರೆ ಉದ್ಧಟತನ

ಬೆಳಗಾವಿ: ಚಳಿಗಾಲದ ಅಧಿವೇಶನ ಆರಂಭದ ಹೊತ್ತಲ್ಲೇ ಉದ್ದವ್‌ ಠಾಕ್ರೆ ನೇತೃತ್ವದ ಶಿವಸೇನೆ ಬಣ ಮತ್ತೆ ಗಡಿ ವಿಚಾರವನ್ನು ಪ್ರಸ್ತಾಪಿಸಿ ಕ್ಯಾತೆ ತೆಗೆದಿದೆ. ಬೆಳಗಾವಿಯ ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗ್ತಿದ್ದು, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ದವ್‌ ಠಾಕ್ರೆ ಪುತ್ರ ಆದಿತ್ಯ ಠಾಕ್ರೆ ಉದ್ಧಟತನದ ಹೇಳಿಕೆ ನೀಡುವ ಮೂಲಕ ಗಡಿ ವಿವಾದದ ಕಿಚ್ಚಿಗೆ ತುಪ್ಪ ಸುರಿಯುವ ಕೆಲಸವನ್ನು ಮಾಡಿದ್ದಾರೆ.

ಏನಿದು ಆದಿತ್ಯ ಠಾಕ್ರೆ ಗಡಿ ಉದ್ಧಟತನ..?

ಬೆಳಗಾವಿ ಗಡಿ ವಿವಾದದ ವಿಚಾರದಲ್ಲಿ ಈ ಕೂಡಲೇ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು. ಗಡಿ ವಿವಾದ ಇತ್ಯರ್ಥವಾಗುವವರೆಗೆ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಬೇಕು ಎಂದು ಮಹಾರಾಷ್ಟ್ರದ ಮಾಜಿ ಸಚಿವ ಆದಿತ್ಯ ಠಾಕ್ರೆ ಗಡಿ ವಿವಾದವನ್ನು ಕೆದಕಿದ್ದಾರೆ.

ಕಾಂಗ್ರೆಸ್‌ ಜೊತೆ ಮೈತ್ರಿ ಮಾಡಿಕೊಂಡು ಮಹಾ ವಿಕಾಸ ಅಘಾಡಿ ಒಕ್ಕೂಟ ಮಾಡಿಕೊಂಡಿರುವ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣ ಗಡಿ ವಿಚಾರವನ್ನು ಕೆದಕುತ್ತಿರುವುದು ಇದೇ ಹೊಸದೆನಲ್ಲ. ಇಲ್ಲಿಯವರೆಗೆ ಭಾಷಾ ವಿಷ ಬೀಜ ಬಿತ್ತುತ್ತಿದ್ದ ಉದ್ಧವ್ ಠಾಕ್ರೆ ನೇತೃತ್ವದ ಬಣ ಇದೀಗ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಬೇಕುಎಂದು ಹೇಳುವ ಮೂಲಕ ಮತ್ತೆ ಕ್ಯಾತೆ ತೆಗೆದಿದೆ.

Comments (0)

Your email address will not be published. Required fields are marked *

Back to top button