#Exclusive NewsHealthTop Newsಸುದ್ದಿ

ವೆಂಟಿಲೇಟರ್ ನಿಂದ ಹೊರಬಂದು ಡಿಸ್ಚಾರ್ಜ್ ಆಗಿದ್ದ ಎಸ್ಎಂ ಕೃಷ್ಣ….!

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಕೇಂದ್ರದ ಮಾಜಿ ಸಚಿವ ಹಾಗೂ ಮಾಜಿ ರಾಜ್ಯಪಾಲರಾಗಿದ್ದ ಎಸ್. ಎಂ. ಕೃಷ್ಣ ಇಂದು ಬೆಳಗ್ಗೆ 2.30ಕ್ಕೆ ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರಿಗೆ 93 ವರ್ಷ ವಯಸ್ಸಾಗಿತ್ತು.

ಶ್ವಾಸಕೋಶದ ಸೋಂಕಿನಿಂದಾಗಿ ಸುದೀರ್ಘವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಎಸ್ ಎಂ ಕೃಷ್ಣ ಅವರಿಗೆ ವೆಂಟಿಲೇಟರ್ ಅಳವಡಿಸಿ ಚಿಕಿತ್ಸೆ ನೀಡಲಾಗಿತ್ತು. ಇನ್ನು ವೆಂಟಿಲೇಟರ್‌ ಅಳವಡಿಸಿದ ಬಳಿಕ ಎಸ್ ಎಂ ಕೃಷ್ಣ ಚೇತರಿಸಿಕೊಳ್ಳೋದು ಕಷ್ಟ ಎನ್ನುವುದು ವೈದ್ಯರ ಭಾವನೆಯಾಗಿತ್ತು. ಆದರೆ 93ನೇ ವಯಸ್ಸಿನಲ್ಲೂ ಚೇತರಿಸಿಕೊಂಡು ವೆಂಟಿಲೇಟರ್‌ನಿಂದ ಹೊರಬಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.

ಮಣಿಪಾಲ್ ಆಸ್ಪತ್ರೆಯಲ್ಲಿ ಸುದೀರ್ಘ ಸಮಯದಿಂದಲೂ ಚಿಕಿತ್ಸೆ ಪಡೆಯುತ್ತಿದ್ದ ಎಸ್ ಎಂ ಕೃಷ್ಣ ಅವರು ಪವಾಡ ಸದೃಶ ರೀತಿಯಲ್ಲಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.

 

Comments (0)

Your email address will not be published. Required fields are marked *

Back to top button