ಗ್ವಾಲಿಯರ್ : ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ಶಾಕಿಂಗ್ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕೆಲಸ ಕೊಡಿಸುವೆ ಎಂದು ಮಹಿಳೆಗೆ ಕಿರುಕುಳ ನೀಡಿದ ಆರೋಪದ ಮೇಲೆ ಲೋಕೋಪಯೋಗಿ ಇಲಾಖೆಯ ಎಂಜಿನಿಯರ್‌ಗೆ ಮಹಿಳೆಯೊಬ್ಬರು ಚಪ್ಪಲಿಯಿಂದ ಥಳಿಸಿರುವ ಘಟನೆ ನಡೆದಿದೆ.
ಕೆಲಸ ಕೊಡಿಸುವುದಾಗಿ ಮಹಿಳೆಯೊಂದಿಗೆ ಎಂಜಿನಿಯರ್ ಅನುಚಿತವಾಗಿ ವರ್ತಿಸಿದ್ದಾರೆ . ಈ ಘಟನೆಯ ನಂತರ, ಕೋಪಗೊಂಡ ಸ್ಥಳೀಯ ಜನರು ಮತ್ತು ಮಹಿಳೆಯ ಕುಟುಂಬ ಸದಸ್ಯರು ಇಂಜಿನಿಯರ್ ಅನ್ನು ಹಿಡಿದು ಚಪ್ಪಲಿಯಿಂದ ಹೊಡೆದಿದ್ದಾರೆ. ಈ ಘಟನೆ ಭಾನುವಾರ ನಡೆದಿದ್ದು, ಅದರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಆರೋಪಿ ಪಿಡಬ್ಲ್ಯೂಡಿ ನೌಕರನನ್ನು ದಾತಿಯಾ ನಿವಾಸಿ ರಾಮಸ್ವರೂಪ್ ಕುಶ್ವಾಹ ಎಂದು ಗುರುತಿಸಲಾಗಿದ್ದು. ಇವರು ದಾಬಾದಲ್ಲಿ ಸಬ್ ಇಂಜಿನಿಯರ್ ಆಗಿ ನೇಮಕಗೊಂಡಿದ್ದಾರೆ. ಉದ್ಯೋಗದ ಹೆಸರಿನಲ್ಲಿ ವಂಚಿಸಲಾಗಿದೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಕೆಲಸ ಕೊಡಿಸುವ ನೆಪದಲ್ಲಿ ಕೋಣೆಗೆ ಕರೆದೊಯ್ದು ಕಿರುಕುಳ ನೀಡಲು ಯತ್ನಿಸಿದ್ದಾನೆ ಎಂದು ಸಂತ್ರಸ್ತ ಮಹಿಳೆ ಆರೋಪಿಸಿದ್ದಾರೆ.


