Saturday, September 13, 2025
24.2 C
Bengaluru
Google search engine
LIVE
ಮನೆ#Exclusive Newsಎಸ್​ಎಂ ಕೃಷ್ಣ ಅಗಲಿಕೆಗೆ ನಟಿ ರಮ್ಯಾ ಭಾವುಕ ಪೋಸ್ಟ್​​....

ಎಸ್​ಎಂ ಕೃಷ್ಣ ಅಗಲಿಕೆಗೆ ನಟಿ ರಮ್ಯಾ ಭಾವುಕ ಪೋಸ್ಟ್​​….

ಬೆಂಗಳೂರು: ನಾಡು ಕಂಡ ಅದಮ್ಯ ಚೇತನ, ಸೌಮ್ಯ ಸ್ವಭಾವದ ಅಜಾತಶತ್ರು, ದೂರದೃಷ್ಟಿಯ ಕನಸುಗಾರ ಮಾಜಿ ಸಿಎಂ ಎಸ್‌.ಎಂ‌ ಕೃಷ್ಣ  ಅವರ ಅಗಲಿಕೆಯ ಕುರಿತು ನಟಿ ಹಾಗೂ ಮಾಜಿ ಸಂಸದೆ ರಮ್ಯಾ  ನೋವಿನ ನುಡಿಗಳನ್ನು ತಮ್ಮ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ.

ತಮ್ಮ ಸೋಷಿಯಲ್‌ ಮೀಡಿಯಾ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಈ ಕುರಿತು ಭಾವುಕ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ʻʻಒಬ್ಬ Statesman ಎಲ್ಲಾ ಅರ್ಥಗಳಲ್ಲಿ ರಾಜಕಾರಣಿ ಎಂದಿಗೂ ಅಲ್ಲ. ಅವರು ಯಾರನ್ನೂ, ತಮ್ಮ ಪ್ರತಿಸ್ಪರ್ಧಿಗಳನ್ನು ಸಹ ದ್ವೇಷಿಸಿ ಮಾತನಾಡಲಿಲ್ಲ. ಭವಿಷ್ಯದ ದೃಷ್ಟಿಯುಳ್ಳವ, ದಯಾಮಯಿ ಅನುಕಂಪದಿಂದ ಕೂಡಿರುವ, ಸುಂದರವಾಗಿ ಮಾತನಾಡುವ, ವಿದ್ಯಾವಂತ, ಹಾಸ್ಯಭರಿತ ವ್ಯಕ್ತಿತ್ವದವರು ನೀವು… ನಿಮ್ಮಂತೆ ಮತ್ತೊಬ್ಬರು ಇರಲು ಆಗುವುದಿಲ್ಲ.. ಎಲ್ಲದಕ್ಕಾಗಿ ಧನ್ಯವಾದಗಳು… ಎಂದು ಬರೆದುಕೊಂಡಿದ್ದಾರೆ. ಕೊನೆಯಲ್ಲಿ ನೀವು ಈಗ ನಿಮ್ಮ ಬೆಸ್ಟ್‌ಫ್ರೆಂಡ್‌ ಜೊತೆಗೆ ಇದ್ದೀರಾ ಎಂದು ಬರೆದು ಹಾರ್ಟ್‌ ಎಮೊಜಿ ಹಾಕಿದ್ದಾರೆ.

ಎಸ್​.ಎಂ ಕೃಷ್ಣ ಅವರ ಅಂತಿಮ ದರ್ಶನ ಪಡೆದ ನಟಿ ರಮ್ಯಾ! – Guarantee News

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments