Tuesday, June 24, 2025
25.1 C
Bengaluru
Google search engine
LIVE
ಮನೆ#Exclusive Newsನೂತನ ಆರ್​ಬಿಐ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅಧಿಕಾರ ಸ್ವೀಕಾರ

ನೂತನ ಆರ್​ಬಿಐ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅಧಿಕಾರ ಸ್ವೀಕಾರ

ಭಾರತೀಯ ರಿಸರ್ವ್ ಬ್ಯಾಂಕ್ ನ  26ನೇ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ  ಅವರು ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ. ಡಿ.11 ರಿಂದ  ಜಾರಿಗೆ ಬರುವಂತೆ ಮುಂದಿನ 3 ವರ್ಷಗಳ ಕಾಲ ಗವರ್ನರ್ ಆಗಿ ಅಧಿಕಾರ ನಿರ್ವಹಿಸಲಿದ್ದಾರೆ ಎಂದು ಆರ್‌ಬಿಐ ತಿಳಿಸಿದೆ.

ಶಕ್ತಿಕಾಂತ ದಾಸ್‌ ಅವರ ಅಧಿಕಾರಾವಧಿ ಡಿ.10ರಂದು (ಮಂಗಳವಾರ) ಕೊನೆಗೊಂಡಿತು. ಈ ಹಿನ್ನೆಲೆ ಬುಧವಾರ ಮಲ್ಹೋತ್ರಾ ಅಧಿಕಾರ ಸ್ವೀಕರಿಸಿದ್ದಾರೆ. 2018ರ ಡಿ.12ರಂದು ಮಾಜಿ ಗವರ್ನರ್‌ ಊರ್ಜಿತ್ ಪಟೇಲ್ ಅವರ ಹಠಾತ್ ನಿರ್ಗಮನದ ನಂತರ, RBIನ 25ನೇ ಗವರ್ನರ್ ಆಗಿ ಶಕ್ತಿಕಾಂತ ದಾಸ್‌ ನೇಮಕಗೊಂಡಿದ್ದರು. ಮೂರು ವರ್ಷ ಅಧಿಕಾರ ಪೂರ್ಣಗೊಳಿಸಿದ ಬಳಿಕ 2ನೇ ಅವಧಿಗೂ ಅವರನ್ನೇ ಮುಂದುವರಿಸಲಾಗಿತ್ತು.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments