#Exclusive NewsTop Newsಜಿಲ್ಲೆರಾಜ್ಯಸುದ್ದಿ
ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ : ಗೊ.ರು.ಚನ್ನಬಸಪ್ಪ

ಬೆಂಗಳೂರು; ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತ್ಯ ಪರಿಷತ್ನವರು ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ. ಆದ್ದರಿಂದ ವಯಸ್ಸಾಗಿದ್ದರೂ ಇದನ್ನು ತಿರಸ್ಕರಿಸಲು ಸಾಧ್ಯವಾಗಲಿಲ್ಲ ಎಂದು ನಾಡೋಜ ಡಾ.ಗೊ.ರು.ಚನ್ನಬಸಪ್ಪ ಹೇಳಿದ್ದಾರೆ. ವಯಸ್ಸಿನ ಕಾರಣದಿಂದಾಗಿ ನನಗೆ ಯಾವುದೇ ಜವಾಬ್ದಾರಿಗಳನ್ನು ನಿಭಾಯಿಸಲು ಆಗುತ್ತಿರಲಿಲ್ಲ. ಕನ್ನಡ ಸಾಹಿತ್ಯ ಪರಿಷತ್ತು ನನ್ನ ಮಾತೃ ಸಂಸ್ಥೆಯಾಗಿದ್ದು ಅವರೆಲ್ಲರೂ ಒಗ್ಗೂಡಿ ಸರ್ವಾನುಮತದಿಂದ ನನ್ನನ್ನು ಆಯ್ಕೆ ಮಾಡಿದ್ದರಿಂದ ಸಮ್ಮೇಳನದ ಅಧ್ಯಕ್ಷನಾಗುವ ಆಹ್ವಾನವನ್ನು ತಿರಸ್ಕರಿಸಲು ಆಗಲಿಲ್ಲ. ಅವರ ಪ್ರೀತಿ-ವಿಶ್ವಾಸಕ್ಕೆ ಮೂಕವಿಸ್ಮಿತನಾಗಿದ್ದೇನೆ ಎಂದು ಬಣ್ಣಿಸಿದರು.




