Wednesday, April 30, 2025
24 C
Bengaluru
LIVE
ಮನೆ#Exclusive Newsರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ತಡೆಗೆ ಕ್ರಮ: ಗೃಹಸಚಿವ ಪರಮೇಶ್ವರ್

ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ತಡೆಗೆ ಕ್ರಮ: ಗೃಹಸಚಿವ ಪರಮೇಶ್ವರ್

ಬೆಳಗಾವಿ ಸುವರ್ಣಸೌಧ,ಡಿ.12:ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ಬಗ್ಗೆ ಸಾಮಾಜಿಕ ಜಾಲತಾಣಗಲಾದ ಫೇಸ್ಬುಕ್ , ವಾಟ್ಸಾಪ್, ಹಾಗೂ ಸೈಬರ್ ಜಾಗೃತಿಯ ಸಂದೇಶಗಳ ಮೂಲಕ ಸಾರ್ವಜನಿಕರಲ್ಲಿ ಮೂಡಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಕೆ.ಪ್ರತಾಪ್ ಸಿಂಹ ನಾಯಕ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.

ರಾಜ್ಯದಲ್ಲಿ ಪ್ರಸ್ತುತ ವರ್ಷ ದಲ್ಲಿ ಡಿಜಿಟಲ್ ಅರೆಸ್ಟ್ ಸಂಬಂಧಿತ ಒಟ್ಟು 641 ಪ್ರಕರಣಗಳಲ್ಲಿ 109 ಕೋಟಿ ರೂ ಗೂ ಹೆಚ್ಚು ಮೊತ್ತದ ವಂಚನೆ ಆಗಿದ್ದು, ಅದರಲ್ಲಿ 9.45 ಕೋಟಿ ರೂಗಳನ್ನು ವಶಪಡಿಸಿಕೊಂಡು, 27 ಜನರನ್ನು ಅರೆಸ್ಟ್ ಮಾಡಲಾಗಿದೆ ಎಂದರು.

ಸಾರ್ವಜನಿಕರನ್ನು ಇಂತಹ ಅಪರಾಧಿಕ ಕೃತ್ಯಗಳ ಮೂಲಕ ವಂಚಿಸಲು ನಕಲಿ ಸಿಮ್‌ ಕಾರ್ಡ್ ಹಾಗೂ ನಕಲಿ ಬ್ಯಾಂಕ್ ಖಾತೆಗಳನ್ನು ಮಾರಾಟಕ್ಕೆ ಬಳಸುವ ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ಟೆಲಿಗ್ರಾಂ, ಇತರೆ ಅಂರ್ತಜಾಲ ವೇದಿಕೆಗಳಲ್ಲಿ ಸಕ್ರಿಯವಾಗಿರುವ ಖಾತೆಗಳು ಹಾಗೂ ಗುಂಪುಗಳನ್ನು ಪತ್ತೆ ಹಚ್ಚಿ, 268 ಫೇಸ್‌ಬುಕ್ ಗುಂಪುಗಳು, 465 ಟೆಲಿಗ್ರಾಂ ಗುಂಪುಗಳು, 15 ಇನ್‌ಸ್ಟಾಗ್ರಾಂ ಖಾತೆಗಳು ಹಾಗೂ 61 ವಾಟ್ಸ್ ಆಪ್ ಗುಂಪುಗಳನ್ನು ನಿಷ್ಕ್ರಿಯಗೊಳಿಸಲಾಗಿದೆ ಎಂದರು

ಶಾಲಾ ಕಾಲೇಜುಗಳಿಗೆ ಇತರೆ ಸಂಸ್ಥೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳು ಹಾಗು ಸಾರ್ವಜನಿಕರಿಗೆ “ಡಿಜಿಟಲ್ ಅರಸ ವಂಚನೆಯ ಬಗ್ಗೆ ಜಾಗೃತಿ ಮೂಡಿಸಲು ಜಾಗೃತಾ ಕೈಗೊಳ್ಳಲಾಗುತ್ತಿದೆ.

ಡಿಜಿಟಲ್ ಅರೆಸ್ಟ್ ಮೂಲಕ ಸಾರ್ವಜನಿಕರನ್ನು ವಂಚಿಸುತ್ತಿರುವ ಸೈಬರ್ ವಂಚಕರ ವಿರುದ್ಧ ಪ್ರಕರಣಗಳನ್ನು ದಾಖಲಿಸಿ, ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ದೇಶದಾದ್ಯಂತ ಡಿಜಿಟಲ್ ಅರೆಸ್ಟ್ ಪ್ರಕರಣ ಗಳು ದಿನೇ ದಿನೇ ಅಧಿಕಾವಾಗುತ್ತಿದ್ದು, ಕಳೆದ ವರ್ಷ ಇಡೀ ದೇಶದಲ್ಲಿ 42000 ಪ್ರಕರಣ ದಾಖಲಾಗಿದ್ದು ರಾಜ್ಯದಲ್ಲಿ 11000 ಪ್ರಕರಣ ದಾಖಲಾಗಿದೆ. ಸಾರ್ವಜನಿಕರು ಸೈಬರ್ ವಂಚನೆ ಆದ ಕೂಡಲೇ ಉಚಿತ ಸಹಾಯವಾಣಿ ಸಂಖ್ಯೆ 1930 ಗೆ ಮಾಹಿತಿ ನೀಡುವಂತೆ ತಿಳಿಸಿದರು.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments