ಬೆಂಗಳೂರು: ರೇಣುಕಾಸ್ವಾಮಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.ನಟ ದರ್ಶನ್ ಸೇರಿ ಒಟ್ಟು 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಎ1 ಪವಿತ್ರಗೌಡ, ಎ2 ದರ್ಶನ್, ಎ4 ಜಗದೀಶ್, ಎ7 ಅನುಕುಮಾರ್ ಅಲಿಯಾಸ್ ಅನು, ಎ 12 ಲಕ್ಷ್ಮಣ್, ಎ 11ನಾಗರಾಜ್, ಎ 14 ಪ್ರದೋಷ್ಗೆ ಜಾಮಿನು ಸಿಕ್ಕಿದೆ. ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರು ಜಾಮೀನು ಮಂಜೂರು ಮಾಡಿ ಆದೇಶ ನೀಡಿದ್ದಾರೆ.
ಹೈಕೋರ್ಟ್ನಿಂದ ಷರತ್ತುಬದ್ಧ ಜಾಮೀನು ಮಂಜೂರು.ರೇಣುಕಾಸ್ವಾಮಿ ಕೇಸ್ನಲ್ಲಿ ದರ್ಶನ್ಗೆ ಜಾಮೀನು ಮಂಜೂರು.ಪವಿತ್ರ ಗೌಡಗೂ ರಿಲೀಫ್, ಒಟ್ಟು 7 ಮಂದಿಗೆ ಬಿಗ್ ರಿಲೀಫ್ ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿಯವರಿಂದ ಆದೇಶ.