#Exclusive NewsTop News

ರೈಲಿಗೆ ತಲೆ ಕೊಟ್ಟು ಹೆಡ್ ಕಾನ್‌ಸ್ಟೆಬಲ್ ಆತ್ಮಹತ್ಯೆ

ಬೆಂಗಳೂರು : ಹುಳಿಮಾವ ಪಿಎಸ್‌ನಲ್ಲಿ ಕೆಲಸ ಮಾಡುತ್ತಿದ್ದ 33 ವರ್ಷದ ಹೆಡ್ ಕಾನ್‌ಸ್ಟೆಬಲ್ ತಿಪ್ಪಣ್ಣ ಆಲೂಗೂರು ಬೈಯಪನಹಳ್ಳಿ ವ್ಯಾಪ್ತಿಯಲ್ಲಿ ರೈಲಿಗೆ ತಲೆ ಕೊಟ್ಟು
ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಡೆತ್ ನೋಟ್‌ನಲ್ಲಿ ತನ್ನ ಸಾವಿಗೆ  ಪತ್ನಿ ಮತ್ತು ಮಾವ ಕಾರಣ ಎಂದು ಆರೋಪಿಸಿದ್ದಾರೆ.

ಹೆಂಡತಿ ಹಾಗೂ ಮಾವನ ಕಿರುಕುಳಕ್ಕೆ ಬೇಸತ್ತು ಹೆಡ್‌ಕಾನ್‌ಸ್ಟೇಬಲ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ  ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಹೆಚ್.ಸಿ.ತಿಪ್ಪಣ್ಣ ಆತ್ಮಹತ್ಯೆ ಮಾಡಿಕೊಂಡಿರುವ ಪೊಲೀಸ್. ನನ್ನ ಸಾವಿಗೆ ಪತ್ನಿ ಹಾಗೂ ಮಾವ ಕಾರಣ ಎಂದು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸದ್ಯ ಸಿವಿ ರಾಮನ್ ನಗರ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ.

ಡೆತ್‌ನೋಟ್‌ನಲ್ಲಿ ಏನಿದೆ?
ನಾನು ನನ್ನ ಹೆಂಡತಿಯ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಹೆಂಡತಿಯ 
ತಂದೆಯಾದ ಯಮನಪ್ಪ ಇವನು ನನಗೆ ಜೀವ ಬೆದರಿಕೆ ಹಾಕಿರುತ್ತಾನೆ. ಡಿ.12 ರಂದು ದೂರವಾಣಿ ಕರೆ ಮಾಡಿ ಮಾತನಾಡಿ ಬೆದರಿಕೆ ಹಾಕಿರುತ್ತಾನೆ. 
ಬೆಳಗ್ಗೆ ನಾನು ಕಾಲ್ ಮಾಡಿದಾಗಲೂ ಕೂಡ, ‘ನೀನು ಸತ್ತು ಹೋಗು ನನ್ನ ಮಗಳು ಚೆನ್ನಾಗಿರುತ್ತಾಳೆ’ ಎಂದು ಹೇಳಿ ಅವಾಚ್ಯ ಪದಗಳಿಂದ ಬೈದಿದ್ದಾರೆ
ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ.


Comments (0)

Your email address will not be published. Required fields are marked *

Back to top button