#Exclusive NewsTop Newsದೇಶ/ವಿದೇಶಸುದ್ದಿ
ಭಾರತ-ಪಾಕ್ ಯುದ್ಧದಲ್ಲಿ ಅಲ್ಲು ಹೋರಾಡಿ ದೇಶವನ್ನು ಗೆಲ್ಲಿಸಿದ್ದಾರಾ ?: ರೇವಂತ್ ಕಿಡಿ

ಹೈದರಾಬಾದ್: ನಟ ಅಲ್ಲು ಅರ್ಜುನ್ ಬಂಧನದ ಬೆನ್ನಲ್ಲೇ ಅವರ ನಡೆಗಳನ್ನು ಪ್ರಶ್ನಿಸಿದ್ದ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಮತ್ತೆ ವಾಗ್ದಾಳಿ ನಡೆಸಿದ್ದು, ‘ಅಲ್ಲು ಅರ್ಜುನ್ ಒಬ್ಬ ನಟ. ಗಡಿಯಲ್ಲಿ ಯಾವುದಾದರೂ ಭಾರತ- ಪಾಕಿಸ್ತಾನ ಯುದ್ಧದಲ್ಲಿ ಹೋರಾಡಿ ದೇಶವನ್ನು ಗೆಲ್ಲಿಸಿದ್ದಾರಾ?’ ಎಂದು ಪ್ರಶ್ನಿಸಿದ್ದಾರೆ. ಆಜ್ ತಕ್ ಸುದ್ದಿವಾಹಿನಿಯ ಸಂದರ್ಶನದಲ್ಲಿ ಮಾತನಾಡಿದ ರೆಡ್ಡಿ ಅಲ್ಲು ಅರ್ಜುನ್ ಬಂಧನದ ಕುರಿತು ಕೇಳಲಾದ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತ, ‘ಅಲ್ಲು ಅರ್ಜುನ್ ಸಿನಿಮಾ ನಟ. ಅವರು ಗಡಿಯಲ್ಲಿ ಭಾರತ- ಪಾಕಿಸ್ತಾನ ಯುದ್ಧ ಮಾಡಿ ಗೆದ್ದಿದ್ದಾರಾ? ಅವರು ಸಿನಿಮಾ ಮಾಡಿ, ಹಣಕಟ್ಟಿಕೊಂಡು ಮನೆಗೆ ಹೋದರು’ ಎಂದರು. ಈ ಮೂಲಕ ಅಲ್ಲು ದುಡ್ಡು ಮಾಡಿಕೊಂಡರೆ ಜನರಿಗೇನು ಸಿಕ್ಕಿತು ಎಂಬರ್ಥದಲ್ಲಿ ಪ್ರಶ್ನಿಸಿದರು. ಅಲ್ಲದೇ, ‘ಸಂವಿಧಾನ ಎಲ್ಲರಿಗೂ ಒಂದೇ. ಒಬ್ಬ ಮಹಿಳೆ ಅವರ ಚಿತ್ರ ಪ್ರದರ್ಶನದ ವೇಳೆ ನಿರ್ಲಕ್ಷ್ಯದಿಂದ ಸಾವನ್ನಪ್ಪಿದ್ದರೆ ಕ್ರಮ ಕೈಗೊಳ್ಳದೇ ಸುಮ್ಮನೇ ಕೂರಬೇಕಿತ್ತೇ?’ ಎಂದೂ ಪ್ರಶ್ನಿಸಿದರು




