#Exclusive NewsTop Newsರಾಜಕೀಯರಾಜ್ಯ

ಬಣದ ಹೆಸರಿನಲ್ಲಿ ಸಭೆಗಳನ್ನು ಆಯೋಜಿಸುವುದನ್ನು ಸ್ಥಗಿತಗೊಳಿಸಬೇಕು ; ಬಿ.ವೈ.ವಿಜಯೇಂದ್ರ

ಬೆಂಗಳೂರು: ಬಿಜೆಪಿಯಲ್ಲಿ ಬಣ ರಾಜಕೀಯಕ್ಕೆ ಅವಕಾಶ ಇಲ್ಲವೇ ಇಲ್ಲ. ಬಣದ ಹೆಸರಿನಲ್ಲಿ ಸಭೆಗಳನ್ನು ಆಯೋಜಿಸುವುದನ್ನು ಒಪ್ಪಲಾಗದು. ಈ ನಿಟ್ಟಿನಲ್ಲಿ ಸಭೆ, ಸಮಾವೇಶಗಳನ್ನು ಮಾಡಲು ಯಾರೇ ಹೊರಟಿದ್ದರೂ ಕೂಡಲೇ ತಮ್ಮ ಚಟುವಟಿಕೆಗಳನ್ನು ಸ್ಥಗಿತಗೊಳಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಭಾನುವಾರ ಸೂಚನೆ ನೀಡಿದ್ದಾರೆ.ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಬಿಜೆಪಿಯಲ್ಲಿ ಬಣ ರಾಜಕೀಯಕ್ಕೆ ಅವಕಾಶ ಇಲ್ಲವೇ ಇಲ್ಲ.

ಬಣದ ಹೆಸರಿನಲ್ಲಿ ಸಭೆಗಳನ್ನು ಆಯೋಜಿಸುವುದನ್ನು ಒಪ್ಪಲಾಗದು. ಈ ನಿಟ್ಟಿನಲ್ಲಿ ಸಭೆ, ಸಮಾವೇಶಗಳನ್ನು ಮಾಡಲು ಯಾರೇ ಹೊರಟಿದ್ದರೂ ಕೂಡಲೇ ತಮ್ಮ ಚಟುವಟಿಕೆಗಳನ್ನು ಸ್ಥಗಿತಗೊಳಿಸಬೇಕೆಂದು ವಿನಂತಿಸುವೆ. ಭಾರತೀಯ ಜನತಾ ಪಾರ್ಟಿ ಕೂಡು ಕುಟುಂಬವಿದ್ದಂತೆ, ಪಕ್ಷದ ಚೌಕಟ್ಟಿನಲ್ಲೇ ಪ್ರತಿಯೊಂದು ಸಭೆ, ಕಾರ್ಯಕ್ರಮಗಳು ನಡೆಯಬೇಕೇ ಹೊರತು ಪಕ್ಷದ ನಿಯಮ, ಧ್ಯೇಯಗಳನ್ನು ಬದಿಗೆ ಸರಿಸಿ ಯಾವುದೇ ಚಟುವಟಿಕೆಗಳನ್ನು ನಡೆಸುವುದು ಸಂಘಟನೆಯ ಆಶಯಕ್ಕೆ ಪೂರಕವಾಗಿಲ್ಲದಿರುವುದನ್ನು ವಿನಮ್ರತೆಯಿಂದ ಸಹೃದಯರಲ್ಲಿ ತಿಳಿಸಬಯಸುತ್ತೇನೆಂದು ಹೇಳಿದ್ದಾರೆ.

Comments (0)

Your email address will not be published. Required fields are marked *

Back to top button