Monday, December 8, 2025
18.9 C
Bengaluru
Google search engine
LIVE
ಮನೆಮನರಂಜನೆಹೊಸ ವರ್ಷದ ಪ್ರಯುಕ್ತ ಮೈಸೂರಿಗೆ ದಾಖಲೆ ಸಂಖ್ಯೆಯಲ್ಲಿ ಪ್ರವಾಸಿಗರ ಭೇಟಿ

ಹೊಸ ವರ್ಷದ ಪ್ರಯುಕ್ತ ಮೈಸೂರಿಗೆ ದಾಖಲೆ ಸಂಖ್ಯೆಯಲ್ಲಿ ಪ್ರವಾಸಿಗರ ಭೇಟಿ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಡಿಸೆಂಬರ್ 31ರಂದು ದಾಖಲೆ ಸಂಖ್ಯೆಯ ಪ್ರವಾಸಿಗರು ಭೇಟಿ ನೀಡಿರುವುದು ಅಂಕಿಅಂಶಗಳಿಂದ ತಿಳಿದುಬಂದಿದೆ. ಕ್ರಿಸ್ಮಸ್ ರಜೆ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಯೊಂದಿಗೆ 2023ರ ಡಿಸೆಂಬರ್ 31 ದಾಖಲೆಯ ಸಂಖ್ಯೆಯ ಪ್ರವಾಸಿಗರು ನಗರಕ್ಕೆ ಭೇಟಿ ನೀಡಿದ್ದಾರೆ.

ಡಿಸೆಂಬರ್ 31ರಂದು ಒಟ್ಟು 1.84 ಲಕ್ಷ ಪ್ರವಾಸಿಗರು ಮೈಸೂರು ಅರಮನೆಗೆ ಭೇಟಿ ನೀಡಿದರೆ, ಶ್ರೀ ಚಾಮರಾಜೇಂದ್ರ ಮೃಗಾಲಯಕ್ಕೆ ಡಿಸೆಂಬರ್ ಕೊನೆಯ ವಾರದಲ್ಲಿ 2.28 ಲಕ್ಷ ಮಂದಿ ಭೇಟಿ ನೀಡಿದ್ದಾರೆ. ನೆರೆಯ ಮಂಡ್ಯ ಜಿಲ್ಲೆಯ ಕೃಷ್ಣ ರಾಜ ಸಾಗರ ಅಣೆಕಟ್ಟೆಯ ಬೃಂದಾವನ ಗಾರ್ಡನ್‌ಗಳು ಸಹ ಇದೇ ಅವಧಿಯಲ್ಲಿ ಭಾರಿ ಪ್ರವಾಸಿಗರ ಭೇಟಿಗೆ ಸಾಕ್ಷಿಯಾಗಿದೆ.

ಹಿಂದಿನ ಎರಡು ವರ್ಷಗಳಲ್ಲಿ ಕೋವಿಡ್ -19 ಸಾಂಕ್ರಾಮಿಕದ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬಂದಿರಲಿಲ್ಲ. ಆದರೆ, 2023 ರಲ್ಲಿ ಮೈಸೂರು ಮತ್ತು ಸುತ್ತಮುತ್ತಲಿನ ಪ್ರವಾಸಿ ಆಕರ್ಷಣೆಗಳನ್ನು ಹೊಂದಿರುವ ಪ್ರದೇಶಗಳಿಗೆ ದಾಖಲೆ ಸಂಖ್ಯೆಯ ಪ್ರವಾಸಿಗರು ಬಂದಿದ್ದಾರೆ.

ಕೆಆರ್‌ಎಸ್‌ನಲ್ಲಿರುವ ಬೃಂದಾವನ ಉದ್ಯಾನವನವು ಡಿಸೆಂಬರ್ 23 ರಿಂದ 30 ರವರೆಗೆ ಹೆಚ್ಚಿನ ಸಂಖ್ಯೆಯ ಪ್ರವಾಸಿಗರಿಗೆ ಸಾಕ್ಷಿಯಾಗಿದೆ. 23,714 ವಯಸ್ಕ ಪ್ರವಾಸಿಗರು ಭೇಟಿ ನೀಡಿದ್ದು, ಪ್ರವೇಶ ಶುಲ್ಕದ ಮೂಲಕ 11,85,700 ರೂ. ಸಂಗ್ರಹವಾಗಿದೆ.

33,068 ಮಕ್ಕಳು ಭೇಟಿ ನೀಡಿದ್ದು, 3,30,680 ರೂ. ಸಂಗ್ರಹವಾಗಿದೆ. ಪ್ರವೇಶ ಟಿಕೆಟ್ ಶುಲ್ಕದಲ್ಲಿ ರಿಯಾಯಿತಿಗೆ ಅರ್ಹತೆಯುಳ್ಳು 31,228 ಮಕ್ಕಳು ಭೇಟಿ ನೀಡಿದ್ದು, ಅಂಥವರಿಂದ 1,56,140 ರೂ. ಆದಾಯ ಗಳಿಸಲಾಗಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments