#Exclusive NewsTop Newsರಾಜ್ಯಸುದ್ದಿ

ಮೈಶುಗರ್ ಬಾಕಿ ವಿದ್ಯುತ್ ಬಿಲ್ 52.25 ಕೋಟಿ ರೂ.ಮನ್ನಾ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಮಂಡ್ಯದ ಮೈ ಶುಗರ್ ಸಕ್ಕರೆ ಕಾರ್ಖಾನೆ  52.25 ಕೋಟಿ ರೂ. ವಿದ್ಯುತ್ ಬಿಲ್ ಬಾಕಿಯಲ್ಲಿ 37.74 ಕೋಟಿ ರೂ. ವಿದ್ಯುತ್ ಬಾಕಿಯನ್ನು ಸರಕಾರದ ವತಿಯಿಂದಲೇ ಪಾವತಿಸುವುದು ಹಾಗೂ 15.71 ಕೋಟಿ ಬಾಕಿ ಬಡ್ಡಿ ಮನ್ನಾ ಮಾಡಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.ಮೈಶುಗರ್ ಕಾರ್ಖಾನೆ ಪಾವತಿಸಿಬೇಕಿದ್ದ 37.74 ಕೋಟಿ ವಿದ್ಯುತ್ ಶುಲ್ಕ ಬಾಕಿಯನ್ನು ಸರಕಾರದ ವತಿಯಿಂದಲೇ ಪಾವತಿಸಲು ಹಾಗೂ 15.71 ಕೋಟಿ ಬಾಕಿ ಬಡ್ಡಿ ಮನ್ನಾ ಮಾಡಲು ನಿರ್ಣಯ ಕೈಗೊಳ್ಳಲಾಗಿದೆ.

ಸುವರ್ಣಸೌಧದಲ್ಲಿ ನಡೆದ ಸಂಪುಟ ಸಭೆಯಲ್ಲಿ ಮೈಶುಗರ್ ಕಾರ್ಖಾನೆ ಪಾವತಿಸಿಬೇಕಿದ್ದ 37.74 ಕೋಟಿ ವಿದ್ಯುತ್ ಶುಲ್ಕ ಬಾಕಿಯನ್ನು ಸರಕಾರದ ವತಿಯಿಂದಲೇ ಪಾವತಿಸಲು ಹಾಗೂ 15.71 ಕೋಟಿ ಬಾಕಿ ಬಡ್ಡಿ ಮನ್ನಾ ಮಾಡಲು ನಿರ್ಣಯ ಕೈಗೊಳ್ಳಲಾಗಿದೆ.ಸರ್ಕಾರದ ಈ ನಿರ್ಧಾರದಿಂದ `52.25 ಕೋಟಿ ವಿದ್ಯುತ್ ಬಿಲ್ ವಿವಾದ ಬಗೆಹರಿದಿದ್ದು, ಮೈಸೂರು ಆಡಳಿತ ಮಂಡಳಿ ಹಾಗೂ ರೈತರ ಚಿಂತೆ ದೂರಾಗುವಂತೆ ಮಾಡಿದೆ.

ತಮ್ಮ ಮನವಿಗೆ ಸ್ಪಂದಿಸಿರುವುದಕ್ಕೆ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್   ಮತ್ತು ಜಿಲ್ಲಾ ಸಚಿವ ಎನ್ ಚಲುವರಾಯಸ್ವಾಮಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

 

Comments (0)

Your email address will not be published. Required fields are marked *

Back to top button