Top Newsಕ್ರೈಂ ಸ್ಟೋರಿರಾಜ್ಯಸುದ್ದಿ

ಬೆಂಗಳೂರಲ್ಲಿ ಸದ್ದು ಮಾಡಿದ ಪೊಲೀಸರ ಬಂದೂಕು, ರೌಡಿ ಶೀಟರ್​ಗೆ ಕಾಲಿಗೆ ಗುಂಡೇಟು

ಆನೇಕಲ್: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಮಾಯಸಂದ್ರ ಬಳಿ ಜಿಗಣಿ ಪೊಲೀಸ್​ ಠಾಣೆ ಇನ್ಸ್‌ಪೆಕ್ಟರ್ ಮಂಜುನಾಥ್ ಅವರು ಆತ್ಮರಕ್ಷಣೆಗಾಗಿ ರೌಡಿಶೀಟರ್ ಬೆಸ್ತಮಾನಹಳ್ಳಿ ಲೋಕೇಶ್ ಅಲಿಯಾಸ್ ಲೋಕಿ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ.

ಬೆಸ್ತಮಾನಹಳ್ಳಿ ಲೋಕೇಶ್ ಕಾಲಿಗೆ ಪೊಲೀಸರು ಗುಂಡೇಟು ನೀಡಿದ್ದಾರೆ. ಈತ ರೌಡಿಶೀಟರ್ ಮನೋಜ್ ಎಂಬಾತನ ಮೇಲೆ ಹಲ್ಲೆ ನಡೆಸಿ ತಲೆಮರೆಸಿಕೊಂಡಿದ್ದ. ಆರೋಪಿ ಊರಿಗೆ ಬರುತ್ತಿರುವ ಮಾಹಿತಿ ಮೇರೆಗೆ ಬಂಧಿಸಲು ಜಿಗಣಿ ಇನ್ಸ್‌ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ ಪೊಲೀಸರ ತಂಡ ತೆರಳಿತ್ತು.

ಪ್ರಕರಣ ಸಂಬಂಧ ಬೆಂಗಳೂರು ಗ್ರಾಮಾಂತರ ಹೆಚ್ಚುವರಿ ಎಸ್ಪಿ ನಾಗೇಶ್ ಕುಮಾರ್ ಮಾತನಾಡಿ, ಜಿಗಣಿ ಪೊಲೀಸ್​ ಠಾಣೆಯಲ್ಲಿ ಆರೋಪಿ ಲೋಕಿ ವಿರುದ್ಧ ಯತ್ನ ಕೇಸ್ ದಾಖಲಾಗಿದೆ. ಆರೋಪಿಯನ್ನು ಬಂಧಿಸಲು ಪಿಎಸ್ಐ ಸಿದ್ದನಗೌಡ ನೇತೃತ್ವದ ​ತಂಡ ತೆರಳಿತ್ತು. ಈ ವೇಳೆ ಆರೋಪಿ ಲೋಕಿ ಪೊಲೀಸರ ಸಿಬ್ಬಂದಿ ಚೆನ್ನಬಸವ ಎಂಬವರ ಮೇಲೆ ದಾಳಿ ಮಾಡಿದ್ದಾನೆ. ಅಲ್ಲದೇ ಪರಾರಿಯಾಗಲು ಯತ್ನಿಸಿದ್ದನು. ಈ ವೇಳೆ ಲೋಕೇಶ್  ಕಾಲಿಗೆ ಗುಂಡು ಹೊಡೆದು ಬಂಧಿಸಲಾಗಿದೆ ಎಂದು ತಿಳಿಸಿದರು.

ಆರೋಪಿ ಲೋಕಿ ಮೇಲೆ ಕೊಲೆ, ಕೊಲೆ ಯತ್ನ ಕೇಸ್​ಗಳಿವೆ. ರೌಡಿ ಶೀಟರ್ ಮನು ಹತ್ಯೆಗೆ ಯತ್ನಸಿದ್ದ ಪ್ರಕರಣದಲ್ಲಿ ಲೋಕಿ ಪ್ರಮುಖ ಆರೋಪಿಯಾಗಿದ್ದಾನೆ. ಲೋಕಿ ಸಹಚರರ ಪತ್ತೆಗಾಗಿ ನಾಲ್ಕು ತಂಡ ರಚನೆ ಮಾಡಲಾಗಿದೆ ಬೆಂಗಳೂರು ಗ್ರಾಮಾಂತರ ವಿಭಾಗದಲ್ಲಿ ಗೌಡಿಸಂ ಮಟ್ಟ ಹಾಕುತ್ತೇವೆ. ಶೀಘ್ರದಲ್ಲಿ ಉಳಿದ ಆರೋಪಿಗಳ ಬಂಧನ ಮಾಡಲಾಗುವುದು ಎಂದರು.

Comments (0)

Your email address will not be published. Required fields are marked *

Back to top button