#Exclusive NewsTop Newsರಾಜಕೀಯಸಿನಿಮಾಸುದ್ದಿ

ಬಿಜಿಎಸ್ ಆಸ್ಪತ್ರೆಯಿಂದ ನಟ ದರ್ಶನ್​ ಡಿಸ್ಚಾರ್ಜ್…

 

ನಟ ದರ್ಶನ್ ಅವರು ಬೆನ್ನು ನೋವಿನ ಕಾರಣ ನಿಡಿ ಮಧ್ಯಂತರ ಜಾಮೀನು ಪಡೆದಿದ್ದರು. ಕಳೆದ ಒಂದೂವರೆ ತಿಂಗಳಿಂದ ಅವರು ಆಸ್ಪತ್ರೆಯಲ್ಲಿಯೇ ಇದ್ದರು. ಈಗ ಜಾಮೀನು ಸಿಗುತ್ತಿದ್ದಂತೆ ಅವರು ಸಂಪೂರ್ಣವಾಗಿ ಗುಣಮುಖರಾದಂತೆ ಕಾಣಿಸುತ್ತಿದೆ. ಅವರು ವೈದ್ಯರ ಸಲಹೆ ಪಡೆದು ಆಸ್ಪತ್ರೆಯಿಂದ ಹೊರ ಬಂದಿದ್ದಾರೆ. ಇದು ಸಾಕಷ್ಟು ಚರ್ಚೆಗೆ ಕಾರಣ ಆಗಿದೆ.

ದರ್ಶನ್​ಗೆ ಶಸ್ತ್ರಚಿಕಿತ್ಸೆ ಮಾಡಿಸದೇ ಇದ್ದರೆ ಪಾರ್ಶ್ವವಾಯು ಆಗುತ್ತದೆ ಎಂದು ವೈದ್ಯರು ವರದಿ ನೀಡಿದ್ದರು. ಇದೇ ವರದಿ ನೀಡಿ ದರ್ಶನ್ ಅವರು ಮಧ್ಯಂತರ ಜಾಮೀನು ಪಡೆದು ಆಸ್ಪತ್ರೆ ಸೇರಿದ್ದರು. ಒಂದೂವರೆ ತಿಂಗಳು ಕಳೆದರೂ ದರ್ಶನ್ ಯಾವುದೇ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿಲ್ಲ. ‘ಬಿಪಿ ಕಾರಣಕ್ಕೆ ಶಸ್ತ್ರಚಿಕಿತ್ಸೆ ಆಗಿಲ್ಲ’ ಎಂದು ದರ್ಶನ್ ಪರ ವಕೀಲರು ಹೇಳಿದ್ದರು. ಈಗ ದರ್ಶನ್ ಅವರು ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳದೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಇಂದು (ಡಿಸೆಂಬರ್ 16) ಮಧ್ಯಾಹ್ನ ಬೆಂಗಳೂರಿನ ಕೆಂಗೇರಿಯಲ್ಲಿರುವ ಬಿಜಿಎಸ್ ಆಸ್ಪತ್ರೆಗೆ ಅವರ ಪತ್ನಿ ವಿಜಯಲಕ್ಷ್ಮೀ ಹಾಗೂ ಆಪ್ತ ಧನ್ವಿರ್ ಬಂದಿದ್ದರು. ಆ ಬಳಿಕ ಅವರು ಡಿಸ್ಚಾರ್ಜ್ ಆಗಿ ಕಾರನ್ನು ಏರಿ ನೇರವಾಗಿ ಮನೆಗೆ ತೆರಳಿದ್ದಾರೆ. ‘ಅವರ ಬೆನ್ನು ನೋವು ಈಗ ಎಲ್ಲಿ ಹೋಯಿತು’ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ.

Comments (0)

Your email address will not be published. Required fields are marked *

Back to top button