#Exclusive NewsTop Newsರಾಜಕೀಯರಾಜ್ಯಸುದ್ದಿ

ಹಣದ ಆಮಿಷಕ್ಕೆ ಅನ್ವರ್ ಮಾಣಿಪ್ಪಾಡಿ ಯೂ ಟರ್ನ್….!

ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು 150 ಕೋಟಿ ರೂ. ಆಮಿಷವೊಡ್ಡಿದ ಬಗ್ಗೆ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಅವರು ರಾಜಕೀಯ ಒತ್ತಡದಿಂದ ಯೂ ಟರ್ನ್ ಹೊಡೆದಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಸೋಮವಾರ ಹೇಳಿದ್ದಾರೆ.

ಇಂದು ಸುವರ್ಣ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನ್ವರ್ ಮಾಣಿಪ್ಪಾಡಿ ಅವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ನೋಡಿದ್ದೇನೆ. ಪ್ರಧಾನಿ ಮತ್ತು ಗೃಹ ಸಚಿವರಿಗೆ ಪತ್ರ ಬರೆದಿದ್ದೇನೆ ಎಂದು ಹೇಳಿದ್ದರು. ಅವರು ಹೇಳಿರುವ ವಿಚಾರಗಳನ್ನು ಮುಖ್ಯಮಂತ್ರಿಗಳು ಟ್ವೀಟ್‌ನಲ್ಲಿಯೂ ಉಲ್ಲೇಖಿಸಿದ್ದಾರೆ. ಈ ದಾಖಲೆಗಳು ಎಲ್ಲೂ ಹೋಗಲು ಸಾಧ್ಯವಿಲ್ಲ. ನಾವು ದಾಖಲೆ ಬಿಡುಗಡೆ ಮಾಡುವ ಮುನ್ನ ಅವರೇ ಈ ದಾಖಲೆಗಳನ್ನು ಬಿಡುಗಡೆ ಮಾಡಲಿ” ಎಂದರು.

ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂಬ ಸಿಎಂ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ, ಎಲ್ಲ ಸಂಗತಿಗಳು ನಮ್ಮ ಮುಂದಿವೆ. ಸಿಬಿಐ ತನಿಖೆಗೆ ಅನುಮತಿ ಕೋರಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಲಿ. ಆಮೇಲೆ ಯೋಚಿಸುತ್ತೇವೆ. ಈ ವಿಷಯ ಸಿಬಿಐಗೆ ಗೊತ್ತಿದ್ದು, ಸಿಬಿಐ ತನಿಖೆಗೆ ಮುಂದಾಗಲಿ ಎಂದರು.

Comments (0)

Your email address will not be published. Required fields are marked *

Back to top button