Top Newsರಾಜ್ಯಸಿನಿಮಾಸುದ್ದಿ

ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಪವಿತ್ರಾ ಗೌಡ ಬಿಡುಗಡೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಪವಿತ್ರಾ ಗೌಡ ಇಂದು ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಿದ್ದಾರೆ.

ನೆನ್ನೆ ಶ್ಯೂರಿಟಿ ಪ್ರಕ್ರಿಯೆ ಮುಗಿದು, ಜೈಲಿಗೆ ಆರ್ಡರ್ ಪ್ರತಿ ತಡವಾಗಿದ್ದಕ್ಕೆ ಬಿಡುಗಡೆ ಪ್ರಕ್ರಿಯೆ ಮಾಡಿರಲಿಲ್ಲ. ಹೀಗಾಗಿ ಇವತ್ತು ಬೆಳಗ್ಗೆ 9 ಗಂಟೆ ಬಳಿಕ ರಿಲೀಸ್ ಮಾಡಲು ಜೈಲಾಧಿಕಾರಿಗಳಿಂದ ಮಾಹಿತಿ ನೀಡಿದ್ದಾರೆ. ಪವಿತ್ರಾಗೌಡ ಮತ್ತು ಪ್ರದೂಶ್ ಇಬ್ಬರೂ ಒಂದೇ ಬಾರಿಗೆ ಬಿಡುಗಡೆ. ಅನುಕುಮಾರ್‌ದು ಇವತ್ತು ಆರ್ಡರ್ ಪ್ರತಿ ಸಿಕ್ಕಿದ್ದಲ್ಲಿ ಅವರೂ ಬಿಡುಗಡೆಯಾಗಬಹುದು.

6 ತಿಂಗಳ ಹಿಂದೆ ಜೈಲು ಸೇರಿದ್ದ ದರ್ಶನ್‌ ಗೆಳತಿ ಪವಿತ್ರಾ ಗೌಡ ಮತ್ತು ಇತರರಿಗೆ ಶುಕ್ರವಾರ ಹೈಕೋರ್ಟ್‌ನ ನ್ಯಾ. ಎಸ್‌.ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿತ್ತು. ಸೋಮವಾರ ಜಾಮೀನು ಪ್ರಕ್ರಿಯೆಗಳು ಎಲ್ಲಾ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಂದು(ಡಿ.17) ಬೆಳಗ್ಗೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಪವಿತ್ರಾ ಗೌಡ ಜೊತೆ 14ನೇ ಆರೋಪಿ ಪ್ರದೂಶ್‌ ಬಿಡುಗಡೆಯಾಗಿದ್ದಾನೆ.

ಎಲ್ಲಾ ಆರೋಪಿಗಳು ತಲಾ 1 ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್‌ ಹಾಗೂ ಇಷ್ಟೇ ಮೊತ್ತಕ್ಕೆ ಇಬ್ಬರ ಭದ್ರತೆ ನೀಡಬೇಕು ಸೇರಿದಂತೆ ಹಲವು ಷರತ್ತುಗಳನ್ನು ಕೋರ್ಟ್‌ ವಿಧಿಸಿದೆ.

Comments (0)

Your email address will not be published. Required fields are marked *

Back to top button