Wednesday, January 28, 2026
16.4 C
Bengaluru
Google search engine
LIVE
ಮನೆ#Exclusive Newsಅಂತಾರಾಷ್ಟ್ರೀಯ ಕ್ರಿಕೆಟ್​ಗೆ ದಿಢೀರ್ ವಿದಾಯ ಹೇಳಿದ ಆರ್​.ಅಶ್ವಿನ್.....!

ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ದಿಢೀರ್ ವಿದಾಯ ಹೇಳಿದ ಆರ್​.ಅಶ್ವಿನ್…..!

ಹಿರಿಯ ಸ್ಪಿನ್ನರ್ ಆರ್​.ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ದಿಢೀರ್ ವಿದಾಯ ಹೇಳಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಅಶ್ವಿನ್ ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಮೂಲಕ 14 ವರ್ಷಗಳ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ಕೆರಿಯರ್ ಅನ್ನು ಅಂತ್ಯಗೊಳಿಸಿದ್ದಾರೆ. ಇದಾಗ್ಯೂ ಅವರು ಐಪಿಎಲ್​ನಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದಾರೆ.

106 ಟೆಸ್ಟ್ ಪಂದ್ಯಗಳನ್ನಾಡಿದ್ದು, ಈ ವೇಳೆ 200 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಅಲ್ಲದೆ ತಮ್ಮ ಕೆರಿಯರ್​ನಲ್ಲಿ 27,246 ಎಸೆತಗಳನ್ನು ಎಸೆದಿರುವ ಅವರು 537 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಅನಿಲ್ ಕುಂಬ್ಳೆ ಬಳಿಕ ಭಾರತದ ಪರ ಅತ್ಯಧಿಕ ವಿಕೆಟ್ ಕಬಳಿಸಿದ 2ನೇ ಬೌಲರ್ ಎನಿಸಿಕೊಂಡಿದ್ದಾರೆ.

ಹಾಗೆಯೇ 116 ಏಕದಿನ ಪಂದ್ಯಗಳಲ್ಲಿ 114 ಇನಿಂಗ್ಸ್ ಆಡಿರುವ ಅಶ್ವಿನ್ 6303 ಎಸೆತಗಳಲ್ಲಿ 156 ವಿಕೆಟ್ ಪಡೆದಿದ್ದಾರೆ. ಇನ್ನು 65 ಟಿ20 ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿರುವ ಅಶ್ವಿನ್ 72 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಮೂರು ಸ್ವರೂಪಗಳಲ್ಲೂ 50 ಕ್ಕಿಂತ ಹೆಚ್ಚು ವಿಕೆಟ್ ಕಬಳಿಸಿದ ಟೀಮ್ ಇಂಡಿಯಾ ಬೌಲರ್ ಎನಿಸಿಕೊಂಡಿದ್ದಾರೆ.

ಆರ್​.ಅಶ್ವಿನ್ ವಿದಾಯಕ್ಕೆ ಅಭಿನಂದನೆಗಳು ಕೋರಿದ ಬಿಸಿಸಿಐ

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments