#Exclusive NewsTop Newsಜಿಲ್ಲೆರಾಜಕೀಯರಾಜ್ಯಸುದ್ದಿ

ಕೊಲೆಗೆ ಸಂಚು, ಪ್ರತಿ ದೂರು ನೀಡಿದ ಸಿಟಿ ರವಿ

ಬೆಳಗಾವಿ : ಬೆಳಗಾವಿ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಿಟಿ ರವಿ ನಡುವಣ ಜಟಾಪಟಿ ವಿಕೋಪಕ್ಕೆ ತಿರುಗಿದೆ. ಸಚಿವೆ ಮಾಡಿರುವ ಗಂಭೀರ ಆರೋಪ ಒಂದೆಡೆಯಾದರೆ, ಇದೀಗ ತಮ್ಮ ಮೇಲೆ ರಕ್ತ ಬರುವಂತೆ ಹಲ್ಲೆ ಮಾಡಿದ್ದಾರೆ. ಕೊಲೆಗೆ ಸಂಚು ಹೂಡಲಾಗಿದೆ ಎಂದು ಸಿಟಿ ರವಿ ಆರೋಪಿಸಿದ್ದಾರೆ. ಜತೆಗೆ, ಪ್ರತಿ ದೂರು ಕೂಡ ನೀಡಿದ್ದಾರೆ.

ಕೊಲೆಗೆ ಸಂಚು, ಪ್ರತಿ ದೂರು ನೀಡಿದ ಸಿಟಿ ರವಿ

ಇನ್ನು ಖಾನಾಪುರ ಠಾಣೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಿಟಿ ರವಿ ಕೂಡ ಪ್ರತಿದೂರು ದಾಖಲಿಸಿದ್ದಾರೆ. ಖಾನಾಪುರ ಠಾಣೆಯಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ, ಕಾನೂನು ಸುವ್ಯವಸ್ಥೆ ಕಾರಣ ಪೊಲೀಸರು ಸಿಟಿ ರವಿಯನ್ನು ಬೆಂಗಳೂರಿಗೆ ಸ್ಥಳಾಂತರ ಮಾಡಲು ಮುಂದಾದರು. ಈ ವೇಳೆಯೂ ಭಾರಿ ಹೈಡ್ರಾಮವೇ ನಡೆಯಿತು. ಬಿಜೆಪಿ ನಾಯಕರು ಏಕಾಏಕಿ ಮುಗಿಬಿದ್ದರು. ಇದರಿಂದ ಭಾರಿ ತಳ್ಳಾಟ, ನೂಕಾಟವೇ ನಡೆಯಿತು.ಪೊಲೀಸರ ವರ್ತನೆ ವಿರುದ್ಧ ಆಕ್ರೋಶ ಹೊರಹಾಕಿದ ಸಿಟಿ ರವಿ ನನ್ನ ಕೊಲೆಗೆ ಸಂಚು ನಡೆಸಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಪೊಲೀಸರು ಸಿಟಿ ರವಿಗೆ ರಕ್ತ ಬರುವಂತೆ ಹೊಡೆದಿದ್ದಾರೆ. ಈ ಕಾಂಗ್ರೆಸ್​ನವರು ಏನು ಮಾಡುವುದಕ್ಕೂ ಹಿಂಜರಿಯುವುದಿಲ್ಲ. ಈ ಸರ್ಕಾರ ಬೆಳಗಾವಿಯನ್ನು ಮಿನಿ ಪಾಕಿಸ್ತಾನ ಮಾಡಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಆಕ್ರೋಶ ಹೊರಹಾಕಿದರು.

Comments (0)

Your email address will not be published. Required fields are marked *

Back to top button