#Exclusive NewsTop Newsರಾಜ್ಯಸುದ್ದಿ

ಬೆಳಗಾವಿ ಕೋರ್ಟ್ ಆದೇಶ: ಸಿಟಿ ರವಿ ಬೆಂಗಳೂರಿಗೆ ಶಿಫ್ಟ್!

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಸಂವಿಧಾನಿಕ ಪದಬಳಕೆ ಆರೋಪ ಪ್ರಕರಣದಲ್ಲಿ ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಜಾಮೀನು ಅರ್ಜಿ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಕೋರ್ಟ್‌ ಆದೇಶ ಪ್ರಕಟಿಸಿದೆ. ಸಿ.ಟಿ ರವಿ ಅವರನ್ನ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಬೆಳಗಾವಿ 5ನೇ ಜೆಎಂಎಫ್‌ಸಿ ಕೋರ್ಟ್‌ನ ನ್ಯಾಯಾಧೀರಾದ ಸ್ಪರ್ಶಾ ಡಿಸೋಜಾ ಅವರು ಆದೇಶಿಸಿದ್ದಾರೆ. ಅದರಂತೆ ಟ್ರಾಂಜಿಟ್ ವಾರೆಂಟ್ ಮೇಲೆ ಪೊಲೀಸರು ಸಿ.ಟಿ ರವಿ ಅವರನ್ನ ಬೆಂಗಳೂರಿಗೆ ಕರೆದೊಯ್ಯಲಿದ್ದಾರೆ.

ಹಿರೇಬಾಗೇವಾಡಿ ಪೊಲೀಸರು ಇಂದು ಬೆಳಗ್ಗೆ ಬೆಳಗಾವಿ ಕೋರ್ಟ್‌ಗೆ ಸಿ.ಟಿ ರವಿ ಅವರನ್ನು ಹಾಜರುಪಡಿಸಿದ್ದರು. ಈ ವೇಳೆ ವಕೀಲರು ಜಾಮೀನು ನೀಡುವಂತೆ ಮನವಿ ಮಾಡಿದ್ದರು. ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ ಕೋರ್ಟ್‌ ಆದೇಶ ಕಾಯ್ದಿರಿಸಿತ್ತು. ಆದ್ರೆ, ತನಿಖಾಧಿಕಾರಿಗಳು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಕರೆದೊಯ್ಯಲು ಅನುಮತಿ ನೀಡುವಂತೆ ಮನವಿ ಮಾಡಿದ್ದರು. ಅದರಂತೆ ಬೆಳಗಾವಿ ಕೋರ್ಟ್​, ಅನುಮತಿ ನೀಡಿದ್ದು, ಎಷ್ಟು ಸಮಯಬೇಕು ಎಂದು ಕೇಳಿದೆ. ಇದಕ್ಕೆ ಪೊಲೀಸರು, ವಿಮಾನದಲ್ಲಿ ಮೂಲಕ ಹೋಗುವುದಾರೆ 2 ಗಂಟೆ, ಬೈ ರಸ್ತೆ ಮೂಲಕ ಹೋಗುವುದಾರೆ 12 ಗಂಟೆಬೇಕು ಎಂದು ಕೋರ್ಟ್​ಗೆ ಸ್ಪಷ್ಟಪಡಿಸಿದ್ದಾರೆ.

Comments (0)

Your email address will not be published. Required fields are marked *

Back to top button