Tuesday, June 24, 2025
27.5 C
Bengaluru
Google search engine
LIVE
ಮನೆ#Exclusive News10 ಮಂದಿ ವಿರುದ್ಧ ಎಫ್‌ಐಆರ್‌ ದಾಖಲು : ಸಿ.ಟಿ.ರವಿ

10 ಮಂದಿ ವಿರುದ್ಧ ಎಫ್‌ಐಆರ್‌ ದಾಖಲು : ಸಿ.ಟಿ.ರವಿ

ಬೆಳಗಾವಿ: ಸುವರ್ಣಸೌಧದಲ್ಲಿ ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ  ಮೇಲೆ ಹಲ್ಲೆಗೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಆಪ್ತರು ಸೇರಿ 10 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಹೌದು. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಸಿ.ಟಿ. ರವಿ ಅಸಂವಿಧಾನಿಕ ಪದ ಬಳಕೆ ಆರೋಪ ಕೇಳಿಬಂದ ಬಳಿಕ ಸುವರ್ಣಸೌಧದಲ್ಲಿ ಭಾರೀ ಹೈಡ್ರಾಮಾ ನಡೆದಿತ್ತು. ಲಕ್ಷ್ಮಿ ಹೆಬ್ಬಾಳ್ಕರ್‌ ಬೆಂಬಲಿಗರು ಸೌಧದೊಳಕ್ಕೆ ನುಗ್ಗಿ ಹಲ್ಲೆಗೆ ಯತ್ನಿಸಿದ್ದರು. ಅಲ್ಲದೇ ಹಿರೇಬಾಗೇವಾಡಿ ಪೊಲೀಸ್‌ ಠಾಣೆಯಲ್ಲಿ ಶಾಸಕರ ವಿರುದ್ಧ ಪ್ರಕರಣ ಸಹ ದಾಖಲಾಗಿತ್ತು. ಇದೀಗ ಸಿ.ಟಿ ರವಿ ಕಾನೂನು ಸಮರಕ್ಕೆ ಮುಂದಾಗಿದ್ದಾರೆ.

ಖಾನಾಪುರ ಪೊಲೀಸ್ ಠಾಣೆಗೆ ಸಿ.ಟಿ .ರವಿ ಲಿಖಿತ ದೂರು ಸಲ್ಲಿಸಿದ್ದರು. ಈ ಪ್ರಕರಣವನ್ನು ಹಿರೇಬಾಗೇವಾಡಿ ಠಾಣೆಗೆ ವರ್ಗಾಯಿಸಲಾಗಿತ್ತು. ಭಾನುವಾರ ಸಿ.ಟಿ. ರವಿ ಅವರು ನೀಡಿದ್ದ ಲಿಖಿತ ದೂರಿನ ಪ್ರತಿ ಪೋಸ್ಟ್‌ ಮೂಲಕ ಪೊಲೀಸರ ಕೈ ಸೇರಿದ ಬೆನ್ನಲ್ಲೇ ಬೆಳಗಾವಿ ಹಿರೇಬಾಗೇವಾಡಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments