ಶಿವರಾಜ್ಕುಮಾರ್ ಅವರು ಬೇಗ ಚೇತರಿಕೆ ಕಾಣಲಿ ಎಂದು ಹೋಮ-ಹವನಗಳು ನಡೆದಿದ್ದವು. ಸಾಕಷ್ಟು ಕಡೆಗಳಲ್ಲಿ ಪೂಜೆ ಪುನಸ್ಕಾರ ಮಾಡಲಾಯಿತು. ಶಿವಣ್ಣನ ಅಭಿಮಾನಿಗಳು ದೇವರ ಮೊರೆ ಹೋದರು. ಈ ಎಲ್ಲ ಪೂಜೆ-ಪುನಸ್ಕಾರ, ಹೋಮ-ಹವನ ಹಾಗೂ ಅಭಿಮಾನಿಗಳ ಪ್ರಾರ್ಥನೆ ಫಲ ಕೊಟ್ಟಿದೆ.
ನಟ ಶಿವರಾಜ್ಕುಮರ್ ಅವರ ಸರ್ಜರಿ ಯಶಸ್ವಿಯಾಗಿ ಪೂರ್ಣಗೊಂಡಿದೆ. ಭಾರತೀಯ ಕಾಲಮಾನ ಮಂಗಳವಾರ (ಡಿಸೆಂಬರ್ 24) ಸಂಜೆ 6 ಗಂಟೆಗೆ (ಅಮೆರಿಕದ ಕಾಲ ಮಾನ ಬೆಳಿಗ್ಗೆ 8 ಗಂಟೆಗೆ) ಆಪರೇಷನ್ ಆರಂಭ ಆಯಿತು. 4-5 ಗಂಟೆಗಳ ಕಾಲ ಆಪರೇಷನ್ ನಡೆದಿದ್ದು ಅದು ಯಶಸ್ವಿಯಾಗಿದೆ ಎಂಬ ವಿಚಾರ ಗೊತ್ತಾಗಿದೆ.
ಶಿವರಾಜ್ಕುಮಾರ್ ಮೊದಲಿನಿಂದಲೂ ಪಾಸಿಟಿವ್ ಆಗಿ ಯೋಚಿಸುತ್ತಾ ಬಂದವರು. ಅವರು ಎಲ್ಲವನ್ನೂ ಪಾಸಿಟಿವ್ ಆಗಿ ತೆಗೆದುಕೊಳ್ಳುತ್ತಾರೆ. ಅದೇ ರೀತಿ ಸರ್ಜರಿ ನಡೆಯುತ್ತದೆ ಎಂದಾಗ ಅದನ್ನೂ ಪಾಸಿಟಿವ್ ಆಗಿ ತೆಗೆದುಕೊಂಡರಯ. ಜೋಶ್ನಲ್ಲಿ ಅಮೆರಿಕ ತೆರಳಿದ ಅವರು ಶಸ್ತಚಿಕಿತ್ಸೆ ಪೂರ್ಣಗೊಳಿಸಿಕೊಂಡಿದ್ದಾರೆ. ಈ ವಿಚಾರ ತಿಳಿದು ಫ್ಯಾನ್ಸ್ ನಿಟ್ಟುಸಿರು ಬಿಟ್ಟಿದ್ದಾರೆ.