#Exclusive NewsTop Newsಮನರಂಜನೆಸಿನಿಮಾಸುದ್ದಿ
ಮ್ಯಾಕ್ಸ್ ನೋಡಲು ಬಂದ ಸುದೀಪ್ ಕುಟುಂಬ…!

ಬರೋಬ್ಬರಿ ಎರಡೂವರೆ ವರ್ಷಗಳ ಬಳಿಕ ತೆರೆ ಮೇಲೆ ಕಿಚ್ಚನ ಕಣ್ತುಂಬಿಕೊಂಡು ಫ್ಯಾನ್ಸ್ ಖುಷ್ ಆಗಿದ್ದಾರೆ. ಇನ್ನು ಮ್ಯಾಕ್ಸ್ ಸಿನಿಮಾ ಟಿಕೆಟ್ ಕೂಡ ಭಾರೀ ಸಂಖ್ಯೆಯಲ್ಲಿ ಸೋಲ್ಡ್ ಆಗಿದೆ. ಕ್ರಿಸ್ಮಸ್ ಹಬ್ಬದ ಸಡಗರದಲ್ಲಿ ಕಿಚ್ಚ ಸುದೀಪ್ ಅಭಿನಯದ ಮ್ಯಾಕ್ಸ್ ಗ್ರ್ಯಾಂಡ್ ಆಗಿ ತೆರೆಗೆ ಅಪ್ಪಳಿಸಿದೆ. ಇಂದು ಬೆಳಗ್ಗೆ 7 ಗಂಟೆಗೆ ರಾಜ್ಯದ 250ಕ್ಕೂ ಹೆಚ್ಚು ಸಿನಿಮಾ ಮಂದಿರಗಳಲ್ಲಿ ಏಕಕಾಲಕ್ಕೆ ರಿಲೀಸ್ ಆಗಿದೆ. ಆ ಮೂಲಕ ಕ್ರಿಸ್ಮಸ್ ಹಬ್ಬದ ಜೊತೆಗೆ ಸುದೀಪ್ ಅಭಿಮಾನಿಗಳಿಗೆ ಡಬಲ್ ಸಂಭ್ರಮ ಸಿಕ್ಕಿದೆ.
ಪೊಲೀಸ್ ಅಧಿಕಾರಿಯಾಗಿ ಕಿಚ್ಚ ;
ಮ್ಯಾಕ್ಸ್ ಚಿತ್ರದಲ್ಲಿ ಸುದೀಪ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ನಟಿಸಿದ್ದಾರೆ. ಒಂದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದೇ ರಾತ್ರಿಯಲ್ಲಿ ನಡೆಯುವ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಇತ್ತ ಮ್ಯಾಕ್ಸ್ ಸಿನಿಮಾ ನೋಡೋದಕ್ಕೆ ನರ್ತಕಿ ಥಿಯೇಟರ್ಗೆ ಸುದೀಪ್ ಪತ್ನಿ ಪ್ರಿಯಾ ಹಾಗೂ ಮಗಳು ಆಗಮಿಸಿದ್ದಾರೆ.




