#Exclusive NewsTop Newsಮನರಂಜನೆಸಿನಿಮಾಸುದ್ದಿ

ಅಭಿಮಾನಿಯ ಸಾವಿನ ಬಳಿಕ ಅವರು ಮಂಕಾಗಿದ್ದಾರೆ ; ಅಲ್ಲು ಅರವಿಂದ್

‘ಪುಷ್ಪ 2’ ಸಿನಿಮಾ ಪ್ರದರ್ಶನ ಆಗುವಾಗ ಮಹಿಳೆಯೊಬ್ಬರು ಕಾಲ್ತುಳಿತದಿಂದ ನಿಧನರಾದ ಕಾರಣ ಆ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಂಧಿಸಿದ್ದರು. ನಟನ ಬಂಧನಕ್ಕೆ ಹಲವರು ಖಂಡನೆ ವ್ಯಕ್ತಪಡಿಸಿದ್ದರು. ಸರ್ಕಾರ ಮತ್ತು ಚಿತ್ರರಂಗದ ನಡುವೆ ಉತ್ತಮ ಬಾಂಧವ್ಯ ಹೊಂದುವ ಉದ್ದೇಶದಿಂದ ಇಂದು (ಡಿ.26) ಸಂಧಾನ ಸಭೆ ಮಾಡಲಾಗಿದೆ. ಈ ಮೀಟಿಂಗ್​ನಲ್ಲಿ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಚಿತ್ರರಂಗಕ್ಕೆ ಒಂದಷ್ಟು ಮಹತ್ವದ ಸೂಚನೆಗಳನ್ನು ನೀಡಿದ್ದಾರೆ.

ಸಿನಿಮಾಗಳ ವಿಶೇಷ ಪ್ರದರ್ಶನಗಳನ್ನು ಏರ್ಪಡಿಸಿದಾಗ ಇಂಥ ದುರ್ಘಟನೆಗಳು ನಡೆಯುತ್ತವೆ. ಹಾಗಾಗಿ ಸದ್ಯಕ್ಕೆ ಎಲ್ಲ ರೀತಿಯ ಸ್ಪೆಷಲ್ ಶೋಗಳನ್ನು ನಿಷೇಧಿಸಲಾಗಿದೆ. ಅಲ್ಲದೇ, ಸೆಲೆಬ್ರಿಟಿಗಳು ತಮ್ಮ ಸ್ವಂತ ಬೌನ್ಸರ್​ಗಳನ್ನು ನೇಮಿಸಿಕೊಂಡಾಗ ಬೌನ್ಸರ್​ಗಳು ಜನರೊಂದಿಗೆ ಅಪಾಯಕಾರಿಯಾಗಿ ನಡೆದುಕೊಳ್ಳುವಂತಿಲ್ಲ ಎಂದು ಕೂಡ ರೇವಂತ್ ರೆಡ್ಡಿ ಅವರು ಎಚ್ಚರಿಗೆ ನೀಡಿದ್ದಾರೆ.

ಮೃತ ಮಹಿಳೆಯ ಕುಟುಂಬಕ್ಕೆ ಅಲ್ಲು ಅರ್ಜುನ್ ಅವರು 2 ಕೋಟಿ ರೂಪಾಯಿ ಪರಿಹಾರ ನೀಡಿದ್ದಾರೆ. ಅಭಿಮಾನಿಯ ಸಾವಿನ ಬಳಿಕ ಅವರು ಮಂಕಾಗಿದ್ದಾರೆ. ‘ಪುಷ್ಪ 2’ ಸಿನಿಮಾದ ಅಭೂತಪೂರ್ವ ಯಶಸ್ಸನ್ನು ಸಂಭ್ರಮಿಸಲು ಕೂಡ ಅವರಿಗೆ ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಅಲ್ಲು ಅರವಿಂದ್ ಅವರು ಇತ್ತೀಚೆಗೆ ಹೇಳಿಕೆ ನೀಡಿದ್ದರು.

Comments (0)

Your email address will not be published. Required fields are marked *

Back to top button