ಕ್ರೈಂ ಸ್ಟೋರಿಜಿಲ್ಲೆ

ಮೊಬೈಲ್ ಬ್ಲಾಸ್ಟ್ ​ಆಸ್ಪತ್ರೆಗೆ ದಾಖಲಾದ ಯುವಕ

ಬೆಂಗಳೂರು – ಪ್ಯಾಂಟ್ ಜೇಬಿನಲ್ಲಿದ್ದ ಮೊಬೈಲ್ ಪರಿಣಾಮ ಯುವಕನ ತೊಡೆಗೆ ಗಾಯವಾಗಿರುವ ಘಟನೆ ವೈಟ್‌ಫೀಲ್ಡ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಳೆದ ಅಕ್ಟೋಬರ್ ತಿಂಗಳಲ್ಲಿ ಮೊಬೈಲ್ ಖರೀದಿಸಿ ಬಳಸುತ್ತಿದ್ದರು. ಇಂದು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಜೇಬಿನಲ್ಲಿ ಇಟ್ಟುಕೊಂಡಿದ್ದ ಮೊಬೈಲ್ ಏಕಾಏಕಿ ಸ್ಫೋಟಗೊಂಡಿದೆ. ಗಾಯಗೊಂಡಿರುವ ಪ್ರಸಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಶಸ್ತ್ರಚಿಕಿತ್ಸೆಗೆ ವೈದ್ಯರು ಲಕ್ಷಾಂತರ ರೂಪಾಯಿ‌ಖರ್ಚಾಗಲಿದೆ ಎಂದು ತಿಳಿಸಿದ್ದಾರೆ. ಮೊಬೈಲ್ ಯಾವ ಕಂಪನಿಗೆ ಸೇರಿದ್ದು ಎಂಬುದು ತನಿಖೆ ವೇಳೆ ಗೊತ್ತಾಗಬೇಕಿದೆ.


ಮೊಬೈಲ್ ಸ್ಫೋಟ ಪ್ರಕರಣ ಶೋ ರೂಂ ಅವರ ಗಮನಕ್ಕೆ ಬರುತ್ತಿದ್ದಂತೆ ಮೆಡಿಕಲ್ ವೆಚ್ಚದ ಜೊತೆಗೆ ಮೊಬೈಲ್ ಹಣ ಕೊಡುತ್ತೇವೆ ಎನ್ನುತ್ತಿದ್ದಾರೆ. ಆದರೆ ಸರ್ಜರಿಗೆ ಬರೋಬ್ಬರಿ 4 ಲಕ್ಷ ರೂ. ಖರ್ಚು ಆಗುತ್ತದೆ ಎಂದು ವೈದ್ಯರು ಹೇಳುತ್ತಿದ್ದಾರೆ. ಇದರಿಂದ ಪೂರ್ಣ ಪ್ರಮಾಣದ ಬಿಲ್ ಭರಿಸುವಂತೆ ಗಾಯಾಳು ಪಟ್ಟು ಹಿಡಿದಿದ್ದಾರೆ. ಈ ಬಗ್ಗೆ ಸಮಸ್ಯೆ ಹೇಳಿಕೊಳ್ಳಲು ಕುಟುಂಬ ಸದಸ್ಯರು ಮೊಬೈಲ್ ಸೆಂಟರ್‌ಗೆ ಹೋದರೆ ಸರಿಯಾಗಿ ಸ್ಪಂದಿಸದ ಆರೋಪ ಕೂಡ ಕೇಳಿಬಂದಿದೆ.
ವೈಟ್‌ಫೀಲ್ಡ್ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪ್ರಸಾದ್‌ಗೆ ಸದ್ಯ ಈದೀಗ ಆರ್ಥಿಕ ಸಂಕಷ್ಟ ಎದುರಾಗಿದೆ.

Comments (0)

Your email address will not be published. Required fields are marked *

Back to top button