ದೆಹಲಿ : ನರೇಂದ್ರ ಮೋದಿಗೂ ಮುನ್ನ ಎರಡು ಅವಧಿಗಳ ಕಾಲಕ್ಕೆ ದೇಶದ ಪ್ರಧಾನಿ ಪಟ್ಟವನ್ನು ಅಲಂಕರಿಸಿದ್ದ ಮನಮೋಹನ್ ಸಿಂಗ್ ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 92 ವರ್ಷದ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿದಿದೆ. ಈ ಮಧ್ಯೆ ದೆಹಲಿಯಲ್ಲಿ ಡಾ. ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡುವಂತೆ ಪ್ರಧಾನಿ ನರೇಂದ್ರ ಮೋದಿಗೆ ರಾಜ್ಯಸಭೆ ವಿಪಕ್ಷ ನಾಯಕ & ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ.
ಪ್ರಧಾನಿಯಾಗಿ, ವಿತ್ತ ಸಚಿವರಾಗಿ, ಆರ್ಥಿಕ ತಜ್ಞರಾಗಿ ದೇಶದ ಎಕಾನಾಮಿ ವ್ಯವಸ್ಥೆಗೆ ಮನಮೋಹನ್ ಸಿಂಗ್ ಕೊಟ್ಟ ಕೊಡುಗೆ ಅಪಾರ. ಹಾಗಾಗಿ ಪ್ರಧಾನಿ ಮೋದಿಗೆ ಪತ್ರ ಬರೆದಿರುವ ಮಲ್ಲಿಕಾರ್ಜುನ ಖರ್ಗೆ, ದೆಹಲಿಯಲ್ಲಿ ಸ್ಮಾರಕಕ್ಕೆ ಜಾಗ ನೀಡಬೇಕು. ಸ್ಮಾರಕ ನಿರ್ಮಿಸುವ ಜಾಗದಲ್ಲೇ ಅಂತ್ಯಕ್ರಿಯೆ ಮಾಡಬೇಕು. ಅಂತ್ಯಕ್ರಿಯೆ ಮಾಡುವ ಸ್ಥಳ ಸ್ಮಾರಕ ನಿರ್ಮಾಣ ಮಾಡುವಂತಿರಬೇಕು ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ. ಈ ಪತ್ರಕ್ಕೆ ಪ್ರಧಾನಿ ಮೋದಿ ಸ್ಪಂದಿಸುತ್ತಾರಾ ಕಾದುನೋಡಬೇಕಿದೆ.