#Exclusive NewsTop Newsರಾಜಕೀಯಸುದ್ದಿ
ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ

ನವದೆಹಲಿ: ಡಾ. ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡುವಂತೆ ಪ್ರಧಾನಿ ನರೇಂದ್ರ ಮೋದಿಗೆ ರಾಜ್ಯಸಭೆ ವಿಪಕ್ಷ ನಾಯಕ & ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದರು.ಅದರಂತೆ ಸ್ಮಾರಕಕ್ಕೆ ಸ್ಥಳ ನೀಡುವಂತೆ ಜಾಗ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.
ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ಶುಕ್ರವಾರ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಭೆ ನಡೆಸಲಾಗಿತ್ತು. ಸಭೆಯಲ್ಲಿ ಸಿಂಗ್ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಇದೇ ಸಭೆಯಲ್ಲಿ ದೆಹಲಿಯಲ್ಲಿ ಮನಮೋಹನ್ ಸಿಂಗ್ ಸ್ಮಾರಕ ನಿರ್ಮಾಣಕ್ಕೆ ಸ್ಥಳಾವಕಾಶ ಕೋರಲು ನಿರ್ಧರಿಸಲಾಗಿತ್ತು.




