#Exclusive NewsTop Newsಜಿಲ್ಲೆಸುದ್ದಿ

ಶೋಕಾಚರಣೆ ಇದ್ದರೂ ಹೊಸ ವರ್ಷಾಚರಣೆಗೆ ಅಡ್ಡಿ ಇಲ್ಲ : ಡಿ.ಕೆ.ಶಿವಕುಮಾರ್‌

 

ಬೆಂಗಳೂರು : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಘೋಷಿಸಿರುವ ಶೋಕಾಚರಣೆ ಹಿನ್ನೆಲೆಯಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ, ಹೊಸ ವರ್ಷಾಚರಣೆಗೆ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವ ಕುಮಾರ್‌ಸ್ಪಷ್ಟಪ ಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರ ಏಳು ದಿನ ಶೋಕಾಚಾರಣೆ ಘೋಷಣೆ ಮಾಡಿದ್ದರಿಂದ ಸರ್ಕಾರಿ ಕಾರ್ಯಕ್ರಮಗಳನ್ನು ತಡೆ ಹಿಡಿಯಲಾಗಿದೆ. ಖಾಸಗಿ ಕಾರ್ಯ ಕ್ರಮಗಳಲ್ಲಿ ಹಸ್ತಕ್ಷೇಪ ಮಾಡಲ್ಲ. ಖಾಸಗಿಯಾಗಿ ಹೊಸ ವರ್ಷಾಚರಣೆ ಮಾಡುವವರು ಮಾಡಬಹುದು ಎಂದರು.
ಹೊಸವರ್ಷಾಚರಣೆ ಮಾರ್ಗಸೂಚಿ, ಸಮಯಾವಕಾಶದ ಬಗ್ಗೆ ಪೊಲೀಸರು ಮಾಹಿತಿ ನೀಡಲಿದ್ದಾರೆ. ಕಾಲಾವಕಾಶ ವಿಸ್ತರಣೆ ಮಾಡಿದ್ದರೂ ಯಾರೊಬ್ಬರೂ ಕಾನೂನು ಉಲ್ಲಂಘನೆ ಮಾಡುವಂತಿಲ್ಲ.ಯಾರೊಬ್ಬರೂ ದುರ್ವರ್ತನೆ ತೋರುವಂತಿಲ್ಲ.  ಕಾನೂನು ಉಲ್ಲಂಘನೆ ವಿರುದ್ಧ ಕಠಿಣ ಕ್ರಮ ಕಟ್ಟಿಟ್ಟ ಬುತ್ತಿ ಎಂದು ಹೇಳಿದರು.
ಬೆಂಗಳೂರಿನಾದ್ಯಂತ 10 ಸಾವಿರಕ್ಕೂ ಹೆಚ್ಚು ಕ್ಯಾಮೆರಾ ಅಳವಡಿಸಲಾಗಿದ್ದು, ಎಲ್ಲರ ಚಲನವಲನಗಳ ಮೇಲೆ ಕಣ್ಣಿಡಲಾಗುವುದು. ಹೊಸವರ್ಷಾಚರಣೆ ವೇಳೆ ರಾಜ್ಯದ ಗೌರವ, ಗಾಂಭೀರ್ಯ ಕಾಪಾಡಬೇಕು ಎಂದು ಮನವಿ ಮಾಡಿದರು.

Comments (0)

Your email address will not be published. Required fields are marked *

Back to top button