#Exclusive NewsTop Newsರಾಜ್ಯಸುದ್ದಿ
ಉಡುಪಿ: ಹೆಜಮಾಡಿ ಸಮುದ್ರದಲ್ಲಿ ಮುಳುಗಿ ಇಬ್ಬರು ಯುವಕರು ಸಾವು

ಕಾಪು ತಾಲೂಕಿನ ಹೆಜಮಾಡಿಯ ಅಕ್ಷಯ್ ಮತ್ತು ಚಿರಾಗ್ ಅಮೀನ್ ಎಂಬ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಸಮುದ್ರದಲ್ಲಿ ಮುಳುಗುತ್ತಿದ್ದ 6 ಜನರನ್ನು ರಕ್ಷಿಸಲು ಸ್ಥಳೀಯರು ಮುಂದಾಗಿದ್ದರು. ಈ ಪೈಕಿ ನಾಲ್ವರನ್ನು ರಕ್ಷಣೆ ಮಾಡಲಾಗಿದೆ. ಇನ್ನುಳಿದ ಇಬ್ಬರನ್ನು ರಕ್ಷಿಸಲು ಯತ್ನಿಸಿದರೂ ಆ ಪ್ರಯತ್ನ ಫಲಪ್ರದವಾಗಲಿಲ್ಲ. 6 ಯುವಕರಲ್ಲಿ ನಾಲ್ಕು ಜನರನ್ನು ಮಾತ್ರ ಕಾಪಾಡಲು ಸಾಧ್ಯವಾಯಿತು.
ಅಮವಾಸ್ಯೆಯಂದೇ ಇಬ್ಬರು ಯುವಕರು ದಾರುಣ ಅಂತ್ಯ ಕಂಡಿದ್ದಾರೆ. ಸ್ಥಳೀಯರು ಕಾಪಾಡಿದ ನಾಲ್ವರು ಯುವಕರು ನೀರು ಕುಡಿದು ಅಸ್ವಸ್ಥರಾಗಿದ್ದರಿಂದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪಡುಬಿದ್ರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




