#Exclusive NewsSportsTop Newsಕ್ರಿಕೆಟ್ಸುದ್ದಿ

ಐಸಿಸಿ ನೀಡುವ ಪ್ರತಿಷ್ಠಿತ ಪ್ರಶಸ್ತಿಗೆ ಜಸ್ಪ್ರೀತ್ ಬುಮ್ರಾ ನಾಮನಿರ್ದೇಶನ..!

2 ಐಸಿಸಿ ಪ್ರಶಸ್ತಿಗಳ ರೇಸ್​ನಲ್ಲಿ ಬುಮ್ರಾ

ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಬುಮ್ರಾ ಪ್ರತಿ ಪಂದ್ಯದಲ್ಲೂ ತಮ್ಮ ಪ್ರದರ್ಶನವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯುತ್ತಿದ್ದಾರೆ. ಪರ್ತ್, ಅಡಿಲೇಡ್ ಮತ್ತು ಬ್ರಿಸ್ಬೇನ್ ನಂತರ, ಇದೀಗ ಮೆಲ್ಬೋರ್ನ್‌ನಲ್ಲಿಯೂ ಬುಮ್ರಾ ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್‌ಗಳಿಗೆ ಸಿಂಹಸ್ವಪ್ನವಾಗಿದ್ದರು. ಅವರ ಪ್ರದರ್ಶನದಿಂದ ಟೀಂ ಇಂಡಿಯಾವನ್ನು ಸೋಲಿನಿಂದ ಪಾರು ಮಾಡಲು ಸಾಧ್ಯವಾಗದಿದ್ದರೂ, ಸ್ಟಾರ್ ಬೌಲರ್ ತಮ್ಮ ಅತ್ಯುತ್ತಮ ಪ್ರದರ್ಶನದಿಂದ ಇಡೀ ವಿಶ್ವ ಕ್ರಿಕೆಟ್​ನ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇದರ ಜೊತೆಗೆ ಬುಮ್ರಾ ಅವರ ಸಾಧನೆಯನ್ನು ಪರಿಗಣಿಸಿರುವ ಐಸಿಸಿ ಪ್ರಮುಖ 2 ಪ್ರಶಸ್ತಿಗಳಿಗೆ ಬುಮ್ರಾರನ್ನು ನಾಮನಿರ್ದೇಶನ ಮಾಡಿದೆ. ಇದೀಗ ವರ್ಷದ ಅತ್ಯುತ್ತಮ ಕ್ರಿಕೆಟಿಗ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿರುವ ಬುಮ್ರಾ ಇದರ ಜೊತೆಗೆ ವರ್ಷದ ಅತ್ಯುತ್ತಮ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿಗೂ ನಾಮನಿರ್ದೇಶನಗೊಂಡಿದ್ದಾರೆ.

Comments (0)

Your email address will not be published. Required fields are marked *

Back to top button