#Exclusive NewsTop Newsಜಿಲ್ಲೆಸುದ್ದಿ

ಹುಬ್ಬಳ್ಳಿಯಲ್ಲಿ ಸಿಲಿಂಡರ್​ ಸ್ಪೋಟ : ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು…!

ಹುಬ್ಬಳ್ಳಿ :  ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯ ಅಯ್ಯಪ್ಪನ ಸನ್ನಿಧಿಯಲ್ಲಿ ಸಂಭವಿಸಿದ್ದ ಭೀಕರ ಸಿಲಿಂಡರ್ ಸ್ಫೋಟ ಎಲ್ಲರನ್ನೂ ಬೆಚ್ಚಿಬೀಳಿಸಿತ್ತು. 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಬೆಂಕಿಯಲ್ಲಿ ಬೆಂದು ಕಿಮ್ಸ್​ ಆಸ್ಪತ್ರೆ ಸೇರಿದ್ದರು. ತಜ್ಞ ವೈದ್ಯರಿಂದ ಚಿಕಿತ್ಸೆ ಕೊಡಿಸಿದರೂ ಗಾಯಾಳುಗಳನ್ನು ಉಳಿಸಿಕೊಳ್ಳಲು ಆಗುತ್ತಿಲ್ಲ. ಸಾವಿನ ಸರಣಿ ಮುಂದುವರಿದಿದ್ದು ಸೋಮವಾರ ರಾತ್ರಿ ರಾಮನಗರ ನಿವಾಸಿ 26 ವರ್ಷದ ತೇಜಸ್ವರ್ ಸಾತರೆ ಉಸಿರು ಬಿಟ್ಟಿದ್ದಾರೆ. ಮೃತ ತೇಸಜ್ವರ್ 3 ವರ್ಷದಿಂದ ಅಯ್ಯಪ್ಪ ಸ್ವಾಮಿ ಮಾಲೆ ಹಾಕುತ್ತಿದ್ದರು ಎನ್ನಲಾಗಿದೆ. ಅಯ್ಯಪ್ಪನ ಆಶೀರ್ವಾದದಿಂದ ಮಗ ಬದುಕಿ ಬರಬಹುದು ಎಂದುಕೊಂಡಿದ್ದ ಕುಟುಂಬಕ್ಕೆ ಸಾವಿನ ಸುದ್ದಿಯಿಂದ ಆಕಾಶಾವೇ ತಲೆ ಮೇಲೆ ಕಳಚಿ ಬಿದ್ದಂತಾಗಿದೆ.

 

Comments (0)

Your email address will not be published. Required fields are marked *

Back to top button