#Exclusive NewsTop Newsಸುದ್ದಿ

ಚಿಕಿತ್ಸೆ ಫಲಿಸದೆ ಜಿಲ್ಲಾಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಬಾಣಂತಿ!

ಕೊಪ್ಪಳ: ರಾಜ್ಯಾದ್ಯಂತ ಬಾಣಂತಿಯರ ಸಾವಿನ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಸಕಾಲಕ್ಕೆ ಸೂಕ್ತ ಚಿಕಿತ್ಸೆ ಸಿಗದೇ ಮಗು ಗರ್ಭದಲ್ಲೇ ಮೃತಪಟ್ಟರೆ, ಇಂದು ಚಿಕಿತ್ಸೆ ಫಲಿಸದೆ ಕೊಪ್ಪಳದ ಜಿಲ್ಲಾಸ್ಪತ್ರೆಯಲ್ಲಿ ಬೆಳಗಾವಿ ಮೂಲದ ತುಂಬು ಗರ್ಭಿಣಿ ಮೃತಪಟ್ಟಿದ್ದಾರೆ. ಬೆಳಗಾವಿಯ ಕುಕನೂರಿನ ಆಡೂರ್ ಗ್ರಾಮದ ನಿವಾಸಿ ರೇಣುಕಾ ಪ್ರಕಾಶ್ ಹಿರೇಮನಿ ಹೆರಿಗೆಗಾಗಿ ನಿನ್ನೆ ರಾತ್ರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದರು. ಕುಷ್ಟಗಿ ಆಸ್ಪತ್ರೆಯಿಂದ ಜಿಲ್ಲಾ ಆಸ್ಪತ್ರೆಗೆ ಬಂದಿದ್ದ ರೇಣುಕಾಗೆ ಬೆಳಗ್ಗೆ 2:30ರ ಸುಮಾರಿಗೆ ಹೆರಿಗೆ ಆಗಿತ್ತು. ಆದರೆ ಡೆಲಿವರಿಗೂ ಮೊದಲೇ ಮಗು ಮೃತಪಟ್ಟಿದ್ದು, ಹೀಗಾಗಿ ವೈದ್ಯರು ಸಿಜೇರಿಯನ್ ಮಾಡಿ ಮಗುವನ್ನು ಹೊರ ತೆಗೆದಿದ್ದರು. ಈ ಸಮಯದಲ್ಲಿ ಹೈಬಿಪಿ ಮತ್ತು ಹೃದಯಾಘಾತದಿಂದ ರೇಣುಕಾ ಸಾವನ್ನಪ್ಪಿದ್ದಾರೆ.

ರಾಜ್ಯಾದ್ಯಂತ ಬಾಣಂತಿಯರ ಸಾವಿನ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಸಕಾಲಕ್ಕೆ ಸೂಕ್ತ ಚಿಕಿತ್ಸೆ ಸಿಗದೇ ಮಗು ಗರ್ಭದಲ್ಲೇ ಮೃತಪಟ್ಟರೆ, ಇಂದು ಚಿಕಿತ್ಸೆ ಫಲಿಸದೆ ಕೊಪ್ಪಳದ ಜಿಲ್ಲಾಸ್ಪತ್ರೆಯಲ್ಲಿ ಬೆಳಗಾವಿ ಮೂಲದ ತುಂಬು ಗರ್ಭಿಣಿ ಮೃತಪಟ್ಟಿದ್ದಾರೆ.

Comments (0)

Your email address will not be published. Required fields are marked *

Back to top button