Thursday, September 11, 2025
18.9 C
Bengaluru
Google search engine
LIVE
ಮನೆ#Exclusive Newsಹೊಸ ವರ್ಷಕ್ಕೆ ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ....!

ಹೊಸ ವರ್ಷಕ್ಕೆ ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ….!

ನವದೆಹಲಿ: 2025 ಎಲ್ಲರಿಗೂ ಹೊಸ ಅವಕಾಶ, ಯಶಸ್ಸನ್ನು ತರಲಿ ಎಂದು ಹೊಸ ವರ್ಷಕ್ಕೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಶುಭ ಹಾರೈಸಿದ್ದಾರೆ.

ಈ ಕುರಿತು ಟ್ವೀಟ್ ಹಂಚಿಕೊಂಡಿರುವ ಮೋದಿ 2025ಕ್ಕೆ ಎಲ್ಲರಿಗೂ ಶುಭಾಶಯಗಳು, ಈ ವರ್ಷ ಎಲ್ಲರಿಗೂ ಹೊಸ ಅವಕಾಶಗಳು, ಯಶಸ್ಸು ಮತ್ತು ಸಂತೋಷವನ್ನು ತರಲಿ. ಹೊಸ ವರ್ಷ ಎಲ್ಲರಿಗೂ ಆರೋಗ್ಯ ಮತ್ತು ಸಮೃದ್ಧಿಯೊಂದಿಗೆ ಆಶೀರ್ವದಿಸಲಿ ಎಂದು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

 

ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಹೊಸ ವರ್ಷದ ಶುಭಾಶಯಗಳನ್ನು ಹಂಚಿಕೊಂಡಿದ್ದು, ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. 2025ರ ವರ್ಷವು ಎಲ್ಲರಿಗೂ ಸಂತೋಷ, ಸಾಮರಸ್ಯ ಮತ್ತು ಸಮೃದ್ಧಿಯನ್ನು ತರಲಿ. ಈ ಸಂದರ್ಭದಲ್ಲಿ, ಭಾರತ ಮತ್ತು ಜಗತ್ತಿಗೆ ಉಜ್ವಲ ಮತ್ತು ಸುಸ್ಥಿರ ಭವಿಷ್ಯವನ್ನು ರಚಿಸಲು ಒಟ್ಟಾಗಿ ಕೆಲಸ ಮಾಡುವ ನಮ್ಮ ಬದ್ಧತೆಯನ್ನು ನವೀಕರಿಸೋಣ ಎಂದು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

 

 

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments