Saturday, September 13, 2025
21.6 C
Bengaluru
Google search engine
LIVE
ಮನೆ#Exclusive Newsರಾಜ್ಯಕ್ಕೆ ಜೆ.ಪಿ.ನಡ್ಡಾ ಎಂಟ್ರಿ ; ವಿಜಯೇಂದ್ರ ,ನಡ್ಡಾ ಒಂದೇ ಕಾರಿನಲ್ಲಿ ಪ್ರಯಾಣ....!

ರಾಜ್ಯಕ್ಕೆ ಜೆ.ಪಿ.ನಡ್ಡಾ ಎಂಟ್ರಿ ; ವಿಜಯೇಂದ್ರ ,ನಡ್ಡಾ ಒಂದೇ ಕಾರಿನಲ್ಲಿ ಪ್ರಯಾಣ….!

ಬೆಂಗಳೂರು : ಕರ್ನಾಟಕ ಬಿಜೆಪಿಯಲ್ಲಿನ ಬಣ ರಾಜಕೀಯ ಮತ್ತು ರಾಜ್ಯ ರಾಜಕೀಯದಲ್ಲಿನ ವಿವಿಧ ಬೆಳವಣಿಗೆಗಳ ಮಧ್ಯೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಜೆಪಿ ನಡ್ಡಾ ಬೆಂಗಳೂರಿಗೆ ಆಗಮಿಸಿದ್ದಾರೆ. ಗುರುವಾರ ರಾತ್ರಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಪ್ರತಿಪಕ್ಷ ನಾಯಕ ಆರ್ ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ಯುವ ಮೋರ್ಚಾ ಅಧ್ಯಕ್ಷ ಧೀರಜ್ ಸ್ವಾಗತಿಸಿದರು.

ಬಳಿಕ ವಿಮಾನ ನಿಲ್ದಾಣದ ವಿಐಪಿ ಲಾಂಜ್​​ನಲ್ಲಿ ನಡ್ಡಾ ಅವರು, ರಾಜ್ಯ ಬಿಜೆಪಿ ನಾಯಕನ ಜೊತೆ ನಡ್ಡಾ ಮಾತುಕತೆ ನಡೆಸಿದರು.

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಹೇಗೆ ನಡೆಯುತ್ತಿವೆ ಎಂದು ವಿವರ ಕೇಳಿದರು. ಹಿಮಾಚಲ ಪ್ರದೇಶದಲ್ಲಿ ಗ್ಯಾರಂಟಿ ಯೋಜನೆ ಬೆಳವಣಿಗೆ ಬಗ್ಗೆ ಪ್ರಸ್ತಾಪಿಸಿ ಕರ್ನಾಟಕ ಸ್ಥಿತಿಗತಿ ಬಗ್ಗೆ ಮಾಹಿತಿ ತಿಳಿದುಕೊಂಡರು.ಇದೇ ವೇಳೆ ಪ್ರತಿಕ್ರಿಸಿದ ರಾಜ್ಯ ಬಿಜೆಪಿ ನಾಯಕರು, ಕಾಂಗ್ರೆಸ್ ಸರ್ಕಾರಕ್ಕೆ ಯೋಜನೆಗಳನ್ನು ಮುಂದುವರಿಸುವುದು ಕಷ್ಟವಾಗುತ್ತಿದೆ ಎಂದು ವಿವರಿಸಿದ್ದಾರೆ. ಇದಲ್ಲದೆ ಬಸ್ ದರ ಹೆಚ್ಚಳದ ಬಗ್ಗೆಯೂ ಮಾಹಿತಿ ನೀಡಿದರು.

 

 

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments